Friday, March 1, 2024
Homeಸುದ್ದಿಸಿಎಂ ಬೊಮ್ಮಾಯಿ ಎಸ್ಕಾರ್ಟ್​ ವಾಹನ ಪಲ್ಟಿ: ನಡೆದುಕೊಂಡು ಹೋಗುತ್ತಿದ್ದ ತಾಯಿ-ಮಗನಿಗೆ ಗಾಯ..!

ಸಿಎಂ ಬೊಮ್ಮಾಯಿ ಎಸ್ಕಾರ್ಟ್​ ವಾಹನ ಪಲ್ಟಿ: ನಡೆದುಕೊಂಡು ಹೋಗುತ್ತಿದ್ದ ತಾಯಿ-ಮಗನಿಗೆ ಗಾಯ..!

ಚಿತ್ರದುರ್ಗ: ಸಿಎಂ ಬಸವರಾಜ ಬೊಮ್ಮಾಯಿ ಬೆಂಗಾವಲು ವಾಹನ ಪಲ್ಟಿಯಾಗಿ ಇಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ತಾಯಿ- ಮಗ- ಗಂಭೀರ ಗಾಯಗೊಂಡಿದ್ದಾರೆ.

ಚಿತ್ರದುರ್ಗದ ಹಿರಿಯೂರು ತಾಲೂಕು ಕಚೇರಿ ಬಳಿ ಈ ದುರ್ಘಟನೆ ಸಂಭವಿಸಿದೆ. ವಾಣಿವಿಲಾಸ ಡ್ಯಾಂನಿಂದ ಹಿರಿಯೂರಿಗೆ ಬರುವ ವೇಳೆ ಈ ಅವಘಡ ಸಂಭವಿಸಿದ್ದು, ರಸ್ತೆಯಲ್ಲಿ ತೆರಳುತ್ತಿದ್ದ ತಾಯಿ, ಮಗನಿಗೆ ಗಾಯವಾಗಿದೆ. ಮಸ್ಕಲ್ ಗ್ರಾಮದ ಮಂಜುಳಾ ಮತ್ತು ಪುತ್ರ ಮನೋಜ್​ ಗಾಯಾಳುಗಳಾಗಿದ್ದು ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಲಾಗುತ್ತಿದೆ.

ಸಡನ್​ ಆಗಿ ಬ್ರೇಕ್​ ಹಾಕಿದ್ದಕ್ಕೆ ಬೆಂಗಾವಲು ಜೀಪ್​ ಪಲ್ಟಿ ಆಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಕುರಿತಾಗಿ ಚಿತ್ರದುರ್ಗ ಎಸ್ಪಿ ಕೆ.ಪರಶುರಾಮ್ ಮಾಹಿತಿ ನೀಡಿದ್ದು, ಪಲ್ಟಿ ಆಗಿದ್ದು ಸಿಎಂ ಬೆಂಗಾವಲು ವಾಹನ ಅಲ್ಲ. ಸಿಎಂ ಬೊಮ್ಮಯಿ ಅವರ ಇತರೆ ಭದ್ರತೆಯಲ್ಲಿದ್ದ ವಾಹನ. ಪೊಲೀಸ್ ವಾಹನ ಪಲ್ಟಿ ವೇಳೆ ಪಾದಾಚಾರಿಗಳಿಬ್ಬರಿಗೆ ಗಾಯಯಾಗಿದೆ.

ಜೊತೆಗೆ ಪಲ್ಟಿಯಾದ ವಾಹನದಲ್ಲಿದ್ದ ಪಿಐ ರಮಾಕಾಂತ್, ಪಿಎಸ್ ಐ ಅನಸುಯಾ, ಪಿಸಿಗಳಾದ ರಮೇಶ, ಅರ್ಚಿತಾ, ಚಾಲಕ ಪ್ರವೀಣ್​ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News