Wednesday, April 24, 2024
Homeಸುದ್ದಿಕರಾವಳಿಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾದ ಪತಿ!

ಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾದ ಪತಿ!

ಸುಳ್ಯ‌ : ಪತ್ನಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ತುಂಬಿಸಿ ಪತಿ ಪರಾರಿಯಾದ ಘಟನೆ ಸುಳ್ಯ ನಗರದ ಬೀರಮಂಗಲದಿಂದ ವರದಿಯಾಗಿದೆ. ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಸ್ಥಳೀಯ ಹೊಟೇಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಇಮ್ರಾನ್‌ ಕೃತ್ಯವೆಸಗಿದ ಕಟುಕ.

ಇಮ್ರಾನ್‌ ಕಳೆದ 6 ತಿಂಗಳಿನಿಂದ ಬೀರಮಂಗಲ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಎರಡು ದಿನಗಳ ಹಿಂದೆ ಊರಿಗೆ ತೆರಳುತ್ತೇನೆ ಎಂದು ಹೊಟೇಲ್‌ ನವರಲ್ಲಿ ತಿಳಿಸಿದ್ದ. ಒಬ್ಬನೇ ಮನೆಯಿಂದ ತೆರಳಿದ್ದು ಇದಕ್ಕೂ ಮುನ್ನ ಮನೆಯಲ್ಲಿ ಕಿರುಚಿದ ಶಬ್ದ ಸ್ಥಳೀಯರಿಗೆ ಕೇಳಿಸಿತ್ತು. ಈ ವಿಚಾರವನ್ನು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದು, ಪೊಲೀಸರು ಮಂಗಳವಾರ ಸಂಜೆ ಮನೆಯ ಬಾಗಿಲು ಒಡೆದು ನೋಡಿದಾಗ ಮನೆಯೊಳಗೆ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹವಿರುವುದು ಪತ್ತೆಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News