Friday, April 26, 2024
Homeಸುದ್ದಿಪಬ್ಲಿಕ್ ಟಿವಿ ವಾಹಿನಿ ಮುಖ್ಯಸ್ಥ, ನಿರೂಪಕ ವಿರುದ್ಧ ಜಾಮೀನು ರಹಿತ ಕೇಸು ದಾಖಲಿಸಲು ನ್ಯಾಯಾಲಯ ಸೂಚನೆ

ಪಬ್ಲಿಕ್ ಟಿವಿ ವಾಹಿನಿ ಮುಖ್ಯಸ್ಥ, ನಿರೂಪಕ ವಿರುದ್ಧ ಜಾಮೀನು ರಹಿತ ಕೇಸು ದಾಖಲಿಸಲು ನ್ಯಾಯಾಲಯ ಸೂಚನೆ

ಬೆಂಗಳೂರು, ಮಾ.25: ದೇಶದ ಸಮಗ್ರತೆಯ ವಿರುದ್ಧ ಪೂರ್ವಗ್ರಹ ಪೀಡಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ದೂರನ್ನು ಪರಿಗಣಿಸಿರುವ ನ್ಯಾಯಾಲಯ ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್. ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಜಾಮೀನು ರಹಿತ ಕೇಸ್ ದಾಖಲಿಸಲು ಪೊಲೀಸರಿಗೆ ಸೂಚಿಸಿದೆ.

ಭಾರತ ದೇಶ ಸೃಷ್ಟಿಯಾಗಿದ್ದೇ ಹಿಂದೂ ರಾಷ್ಟ್ರದ ಆಧಾರದಲ್ಲಿ ಎಂದು ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್.ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ಅವರ ಹೇಳಿಕೆಯು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಎರಡು ಸಮುದಾಯಗಳ ಮಧ್ಯೆ ವೈರತ್ವ ನಿರ್ಮಾಣ ಉದ್ದೇಶದಿಂದ ಕೂಡಿದೆ. ಹಾಗಾಗಿ ದೂರು ನೀಡಲಾಗಿತ್ತು ಎಂದು ದೂರು ದಾರ ವಕೀಲ ಮುಹಮ್ಮದ್ ಗೌಸ್ ತಿಳಿಸಿದರು.

ದೂರುದಾರರ ಪರ ವಕೀಲ ಮುಹಮ್ಮದ್ ಗೌಸ್ ಅವರ ವಾದವನ್ನು ಪರಿಗಣಿಸಿದ ನ್ಯಾಯಾಲಯವು ಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ರಂಗನಾಥ್ ಮತ್ತು ನಿರೂಪಕ ಅರುಣ್ ಬಡಿಗೇರ ವಿರುದ್ಧ ಗೋಗಿ ಪೊಲೀಸ್ ಠಾಣೆಯಲ್ಲಿ ಕಲಂ 153(ಬಿ) 505(1)(ಬಿ)(ಸಿ) ಮತ್ತು 505(2) ಐಪಿಸಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡಿದೆ.

ಫೆಬ್ರವರಿ 3ರಂದು ಪಬ್ಲಿಕ್ ಟಿವಿ ವಾಹಿನಿಯು ‘ವಿದ್ಯಾದೇಗುಲದಲ್ಲಿ ಧರ್ಮ ಯುದ್ಧ ಬಿಗ್ ಬುಲೆಟಿನ್’ ಎಂಬ ಶಿರ್ಷಿಕೆಯಡಿಯಲ್ಲಿ ನಡೆಸಿದ ಕಾರ್ಯಕ್ರಮದಲ್ಲಿ ವಾಹಿನಿಯ ಮುಖ್ಯಸ್ಥ ಎಚ್.ಆರ್.ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗರ್ ‘ಇದು ಭಾರತ. ಭಾರತ ಸೃಷ್ಟಿಯಾಗಿದ್ದೇ ಹಿಂದೂ ರಾಷ್ಟ್ರದ ಆಧಾರದಲ್ಲಿ’ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಮೂಲಕ ಅವರು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತರಲು ಪ್ರಯತ್ನಿಸಿದ್ದಾರೆ. ದೇಶದ ಸಮಗ್ರತೆಯ ವಿರುದ್ಧ ಪೂರ್ವಗ್ರಹ ಪೀಡಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇದರ ವಿರುದ್ಧ ಬಂದೇನವಾಜ್ ಗೋಗಿ ಅವರು ಶಹಾಪುರದ ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News