Home ಸುದ್ದಿ ಕರಾವಳಿ ಕಾರ್ಕಳ: ಶಾಲಾ ಪ್ರವಾಸದ ಬಸ್ ಪಲ್ಟಿ – ಶಿಕ್ಷಕಿಯರು, ವಿದ್ಯಾರ್ಥಿಗಳಿಗೆ ಗಾಯ

ಕಾರ್ಕಳ: ಶಾಲಾ ಪ್ರವಾಸದ ಬಸ್ ಪಲ್ಟಿ – ಶಿಕ್ಷಕಿಯರು, ವಿದ್ಯಾರ್ಥಿಗಳಿಗೆ ಗಾಯ

ಕಾರ್ಕಳ, ಜ 02: ಶಾಲಾ ಮಕ್ಕಳ ಪ್ರವಾಸದ ಬಸ್ ಮಗುಚಿ ಬಿದ್ದ ಘಟನೆ ಧರ್ಮಸ್ಥಳ- ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪ ಪಾಜೆಗುಡ್ಡೆ ತಿರುವಿನಲ್ಲಿ ಇಂದು ನಡೆದಿದೆ.

ಬಸ್ ಮಗುಚಿ ಬಿದ್ದ ಪರಿಣಾಮ ಮೂವರು ಶಿಕ್ಷಕಿಯರು ಮತ್ತು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಪ್ರಮಾಣದ ಗಾಯಗೊಂಡಿದ್ದು, ಇಪ್ಪತ್ತು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢ ಶಾಲೆಗೆ ಸೇರಿದ ಮಕ್ಕಳು ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆಂದು ಧರ್ಮಸ್ಥಳದಿಂದ ಮಂಗಳೂರಿಗೆ ತೆರಳುತಿದ್ದಾಗ ಈ ಘಟನೆ ನಡೆದಿದೆ.

Translate »

You cannot copy content from Baravanige News