Saturday, April 20, 2024
Homeಸುದ್ದಿಕರಾವಳಿಉಡುಪಿ: ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆ

ಉಡುಪಿ: ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆ

ಉಡುಪಿ: ಬ್ರಹ್ಮಾವರದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ನಡೆದಿದೆ.

ಭೂಮಿಕಾ (18) ನಾಪತ್ತೆಯಾದ ಯುವತಿ.

ಫೆಬ್ರವರಿ 26ರಂದು ಕೆರಾಡಿಯ ತನ್ನ ಮನೆಯಿಂದ ಟೈಲರ್‌ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಸ್ ಬರದೆ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್‌ ಠಾಣೆ ದೂ.ಸಂ.(08254) 258233, 9480805460 ,ಬೈಂದೂರು ವೃತ್ತ ನಿರೀಕ್ಷಕರ ಕಚೇರಿ (08254) 251031, 9480805434ನ್ನು ಸಂಪರ್ಕಿಸುವಂತೆ ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳು ತಿಳಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News