Friday, April 26, 2024
Homeಸುದ್ದಿ25 ವರ್ಷದ ಯುವತಿ ಜೊತೆ ಮದುವೆಯಾಗಿದ್ದ 50 ವರ್ಷದ ಶಂಕರಪ್ಪ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ!

25 ವರ್ಷದ ಯುವತಿ ಜೊತೆ ಮದುವೆಯಾಗಿದ್ದ 50 ವರ್ಷದ ಶಂಕರಪ್ಪ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ!

ತುಮಕೂರು ಮಾ.29:  25 ವರ್ಷದ ಯುವತಿ ಜೊತೆ ಮದುವೆಯಾಗಿ ಭಾರಿ ಸುದ್ದಿಯಾಗಿದ್ದ 50 ವರ್ಷದ ಶಂಕರಪ್ಪ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಹೋಬಳಿಯ ಅಕ್ಕಿಮರಿ ಪಾಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಕಳೆದ ವರ್ಷ ಶಂಕರಪ್ಪ (50) ಅವರು  ಮೇಘನಾ (25) ಜೊತೆ ಮದುವೆಯಾಗಿದ್ದರು. ಕಳೆದ ಮೂರು ದಿನಗಳಿಂದ ಗಂಡ ಹೆಂಡತಿ ಜೊತೆ ಜಗಳ ನಡೆಯುತಿತ್ತು. ಶಂಕರಪ್ಪ ಸೋಮವಾರ ಮನೆ ಬಿಟ್ಟು ಹೋಗಿದ್ದರು. ಆದರೆ ಇಂದು ಮುಂಜಾನೆ ಶಂಕರಪ್ಪ ಅವರ ಮೃತದೇಹ ತಮ್ಮ ತೋಟದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಹುಲಿಯೂರು ದುರ್ಗ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಮೇಘನಾ ಸ್ವತಃ ಶಂಕರಪ್ಪ ಬಳಿ ಹೋಗಿ ಮದುವೆಯಾಗಿ ಅಂತಾ ಕೇಳಿಕೊಂಡಿದ್ದರು. ಈ ವೇಳೆ ಮದುವೆಯಾಗದ ಶಂಕರಪ್ಪ ಯುವತಿಯನ್ನು ಒಪ್ಪಿ ಸಮೀಪದ ದೇವಾಲಯದಲ್ಲಿ ಮದುವೆಯಾಗಿದ್ದರು. ಇಬ್ಬರು ಮದುವೆಯಾಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿ ಟ್ರೋಲ್ ಗೆ ಒಳಗಾಗಿದ್ದವು.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News