Thursday, March 28, 2024
Homeಸುದ್ದಿಕರಾವಳಿಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗೆ 3 ವರ್ಷ ಸಜೆ..!!

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗೆ 3 ವರ್ಷ ಸಜೆ..!!

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಮಂಗಳೂರಿನ ನ್ಯಾಯಾಲಯ ಮೂರು ವರ್ಷ ಸಾದಾ ಸಜೆ ವಿಧಿಸಿದೆ.

ಬಜಪೆಯ ಅಬ್ದುಲ್‌ ಹಮೀದ (50) ಅಲಿಯಾಸ್‌ ಹಮೀದ ಶಿಕ್ಷೆಗೊಳಗಾದವನು.

ಈತ 2021ರ ಜೂ.3 ರಂದು ನೆರೆಮನೆಯ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದ. ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್‌ ರಾಘವೇಂದ್ರ ನಾಯ್ಕ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಮತ್ತು ಎಫ್ಟಿಎಸ್‌ಸಿ-1(ಪೋಕ್ಸೋ) ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ಫೆ. 27ರಂದು ಆದೇಶ ನೀಡಿದ್ದಾರೆ.

ಅಪರಾಧಿ ಅಬ್ದುಲ್‌ ಹಮೀದ್‌ಗೆ ಫೋಕ್ಸೋ ಕಾಯಿದೆಯ ಕಲಂ 8ರಡಿ 3 ವರ್ಷ ಸಾದಾ ಸಜೆ ಮತ್ತು 5,000 ರೂ. ದಂಡ, ಭಾರತೀಯ ದಂಡ ಸಂಹಿತೆಯ ಕಲಂ 448ರಡಿ 6 ತಿಂಗಳ ಸಾದಾ ಸಜೆ, ಕಲಂ 354ರಡಿ ಒಂದು ವರ್ಷ ಸಾದಾ ಸಜೆ ಮತ್ತು 1,000 ರೂ. ದಂಡ, ಕಲಂ 323ರಡಿ 6 ತಿಂಗಳ ಸಾದಾ ಸಜೆ ಮತ್ತು 1,000 ರೂ. ದಂಡ, ಕಲಂ 506ರಡಿ 1 ವರ್ಷ ಸಾದಾ ಸಜೆ ಹಾಗೂ 1,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ಬಾಲಕಿಗೆ 1 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಪ್ರಾಸಿಕ್ಯೂಷನ್‌ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ವಾದಿಸಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News