Wednesday, April 24, 2024
Homeಸುದ್ದಿಕರಾವಳಿಮಣಿಪಾಲ: ಮನೆ ಕಳ್ಳತನ ಪ್ರಕರಣ; ಲಕ್ಷಾಂತರ ಮೌಲ್ಯದ ಸೊತ್ತುಗಳ ಸಹಿತ ಇಬ್ಬರು ಯುವಕರು ಪೊಲೀಸ್ ವಶಕ್ಕೆ..!!

ಮಣಿಪಾಲ: ಮನೆ ಕಳ್ಳತನ ಪ್ರಕರಣ; ಲಕ್ಷಾಂತರ ಮೌಲ್ಯದ ಸೊತ್ತುಗಳ ಸಹಿತ ಇಬ್ಬರು ಯುವಕರು ಪೊಲೀಸ್ ವಶಕ್ಕೆ..!!

ಉಡುಪಿ: ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ಅಲೆವೂರು ಆದರ್ಶ ನಗರದ ವರುಣ(19), ಮೂಡು ಅಲೆವೂರಿನ ನೆಹರು ನಗರದ ಕಾರ್ತಿಕ್ ಪೂಜಾರಿ (19) ಬಂಧಿತರು.

ಬಂಧಿತರಿಂದ ಕಳವು ಮಾಡಿದ 2,40,000 ರೂ. ಮೌಲ್ಯದ ಚಿನ್ನಾಭರಣ, 1 ಸ್ಕೂಟರ್ ಹಾಗೂ ಕೃತ್ಯಕ್ಕೆ ಬಳಸಿದ 1 ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಈ ಹಿಂದೆ ಕುಂದಾಪುರ ಠಾಣಾ ವ್ಯಾಪ್ತಿಗೆ ಸಂಬಂಧಪಟ್ಟಂತೆ 2 ಪ್ರಕರಣ ಹಾಗೂ ಮಣಿಪಾಲ ಠಾಣೆಯ 1 ಪ್ರಕರಣ ಸೇರಿ ಒಟ್ಟು 3 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಈ 3 ಪ್ರಕರಣಗಳನ್ನು ಭೇದಿಸಿದ ಪೊಲೀಸರು ಆರೋಪಿಗಳಿಂದ ಸುಮಾರು 4 ಲಕ್ಷ ಮೌಲ್ಯದ ಸೊತ್ತು ಗಳನ್ನು ವಶಪಡಿಸಿಕೊಂಡಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News