Monday, May 27, 2024
Homeಸುದ್ದಿಕರಾವಳಿನಿಟ್ಟೆ ಕಾಲೇಜಿನ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

ಕಾರ್ಕಳ : ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.2 ರಂದು ಸಂಭವಿಸಿದೆ.

ಸೀಮಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಬೈಂದೂರು ಮೂಲದವರಾದ ಇವರು ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದು, ಮಧ್ಯಾಹ್ನ ಹಾಸ್ಟೆಲ್‌ನ ತನ್ನ ಕೊಠಡಿಯಲ್ಲಿ ಫ್ಯಾನ್‌ಗೆ ಚೂಡಿದಾರದ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೀಮಾ ಸುಮಾರು 5 ತಿಂಗಳ ಹಿಂದೆಯೊಮ್ಮೆ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದು ಬಂದಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿದ್ದೆ ಮಾತ್ರೆ ಸೇವಿಸಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ಚಿಕಿತ್ಸೆ ಬಳಿಕ ಚೇತರಿಸಿಕೊಂಡು ಕಾಲೇಜಿಗೆ ಬರಲಾರಂಭಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ಸೀಮಾ ಕೋಣೆಯಲ್ಲಿ ಒಬ್ಬಳೇ ಇರುವಾಗ ಫ್ಯಾನ್‌ಗೆ ಚೂಡಿದಾರದ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News