Tuesday, September 10, 2024
Homeಸುದ್ದಿಕರಾವಳಿಬಿಜೆಪಿ ಶಾಸಕನ ಮನೆಯಲ್ಲಿ 6 ಕೋ.ರೂ. ಪತ್ತೆ: ಹೈಕೋರ್ಟ್ ನಾ.ಮೂ. ನೇತೃತ್ವದಲ್ಲಿ ತನಿಖೆಗೆ ಕಾಂಗ್ರೆಸ್ ಉಸ್ತುವಾರಿ...

ಬಿಜೆಪಿ ಶಾಸಕನ ಮನೆಯಲ್ಲಿ 6 ಕೋ.ರೂ. ಪತ್ತೆ: ಹೈಕೋರ್ಟ್ ನಾ.ಮೂ. ನೇತೃತ್ವದಲ್ಲಿ ತನಿಖೆಗೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆಗ್ರಹ

ಉಡುಪಿ: ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮನೆಯಲ್ಲಿ ಆರು ಕೋಟಿ ರೂ. ಪತ್ತೆ ಪ್ರಕರಣವನ್ನು ಇನ್ನು ಒಂದು ವಾರದ ಒಳಗೆ ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿ ಸಮಗ್ರ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಲೋಕಾಯುಕ್ತ ದಾಳಿ ವೇಳೆ 6 ಕೋಟಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಉಡುಪಿಯ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್
ಕಚೇರಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಬಿಜೆಪಿ ಭ್ರಷ್ಟ ಜನತಾ ಪಾರ್ಟಿಯಾಗಿದ್ದು, ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಈ 40% ಭ್ರಷ್ಟ ಸರ್ಕಾರದಿಂದ ರಾಜ್ಯ ತಲೆತಗ್ಗಿಸುವಂತಾಗಿದೆ.

ಪುತ್ರನ ಮನೆಯಲ್ಲಿ 40 ಲಕ್ಷ ರೂಪಾಯಿ ರೆಡ್ ಹ್ಯಾಂಡ್ ಆಗಿ ಸಿಕ್ಕಿದೆ. 24 ಗಂಟೆ ಒಳಗೆ ಮನೆಯಲ್ಲಿ 6 ಕೋಟಿ ರೂಪಾಯಿ ಪತ್ತೆಯಾಗಿದೆ. ಆದರೆ ಈಗ ಶಾಸಕ ವಿರುಪಾಕ್ಷಪ್ಪ ಎಲ್ಲಿ ತಲೆಮರಸಿಕೊಂಡಿದ್ದಾರೆ..!!??
ಎಂದು ಪ್ರಶ್ನಿಸಿದರು.

ಮೈಸೂರು ಸ್ಯಾಂಡಲ್ ಸುವಾಸನೆಯನ್ನು ಭ್ರಷ್ಟ ಮಾಡಿಬಿಟ್ಟಿದ್ದಾರೆ. ಇದು ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಂತಾಗಿದೆ. ಸಾಬೂನಿನಿಂದ ಎಷ್ಟು ಭ್ರಷ್ಟಾಚಾರವಾಗಿದ್ದರೆ ಇನ್ನು ರಾಜ್ಯದ ಭ್ರಷ್ಟಾಚಾರ ಪ್ರಮಾಣ ಎಷ್ಟಿರಬಹುದು. ಈ ಎಲ್ಲಾ ಭ್ರಷ್ಟಾಚಾರದ ಹಣ ಎಲ್ಲಿಗೆ ಹೋಗಿದೆ..!!? ರಾಜ್ಯದಲ್ಲಿ ಲೂಟಿ ಹೊಡೆದ ಹಣಕ್ಕೆ ಯಾರು ಜವಾಬ್ದಾರಿ..!!? ಲೂಟಿ ಹೊಡೆದ ಹಣದಲ್ಲಿ ಬಸವರಾಜ್ ಬೊಮ್ಮಾಯಿ, ಮಂತ್ರಿಗಳಿಗೆ ಎಷ್ಟು ಪಾಲು ಇದೆ..!!? ಎಂದು ಪ್ರಶ್ನಿಸಿದರು. ಹಾಗೂ ಒಂದು ವಾರದ ಒಳಗೆ ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿ ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಅದರ ಸಂಪೂರ್ಣ ವರದಿಯನ್ನು ಮುಂಬೈನ 40 ಶೇ. ಕಮಿಷನ್ ಸರಕಾರಕ್ಕೆ
ಸಲ್ಲಿಸಬೇಕು ಎಂದು ಟೀಕಿಸಿದರು.

ಕೆ.ಎಸ್.ಡಿ.ಎಲ್ ಅಧ್ಯಕ್ಷ ಶಾಸಕ ವಿರೂಪಾಕ್ಷಪ್ಪ ತಲೆಮರೆಸಿಕೊಳ್ಳಲು ಬಿಟ್ಟಿದ್ಯಾಕೆ..!?? ಎಂದ ಅವರು, ಕೈಗಾರಿಕಾ ಸಚಿವ ನಿರಾಣಿಯ ತಲೆದಂಡ ಆಗಿಲ್ಲ ಯಾಕೆ?, ಈ ಭ್ರಷ್ಟಾಚಾರದಲ್ಲಿ ಬಸವರಾಜ
ಬೊಮ್ಮಾಯಿ ಪಾತ್ರ ಏನು? ಅವರು ಮೌನ ಇರುವುದು ಯಾಕೆ?, ನರೇಂದ್ರ ಮೋದಿ ಒಂದು ವಾಕ್ಯ ಒಂದು ಮಾತನಾಡುತ್ತಿಲ್ಲ ಯಾಕೆ? ಜೆಪಿ ನಡ್ಡ..!!?? ಅಮಿತ್ ಶಾ ಎಲ್ಲಿದ್ದೀರಿ ?, ಇಡಿ, ಸಿ ಬಿ ಐ ಯಾವಾಗ ಕರ್ನಾಟಕಕ್ಕೆ ಬರುತ್ತದೆ. ಶಾಸಕರು ಮಂತ್ರಿಗಳ ಮುಖ್ಯಮಂತ್ರಿಗಳ ಮನೆಗೆ ಯಾವಾಗ ದಾಳಿ ಮಾಡುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

ಈ ಭ್ರಷ್ಟಾಚಾರ ಪ್ರಕರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು ಎಂದ ಅವರು, ಬಿಜೆಪಿ ಶಾಸಕನನ್ನು ಬಂಧಿಸಿ ಬಿಜೆಪಿ ನಾಯಕರು ಯಾರ್ಯಾರು ಈ ಭ್ರಷ್ಟಾಚಾರದಲ್ಲಿ ಪಾಲು ಪಡೆದಿದ್ದಾರೆ ಎಂಬುದನ್ನು ಹೇಳಬೇಕು ಎಂದು ಆಗ್ರಹಿಸಿದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News