Friday, April 26, 2024
Homeಸುದ್ದಿಕರಾವಳಿಕಟಪಾಡಿ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಕಾರು; ಹಲವರಿಗೆ ಗಾಯ

ಕಟಪಾಡಿ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಕಾರು; ಹಲವರಿಗೆ ಗಾಯ

ಕಟಪಾಡಿ: ರಾಷ್ಟೀಯ ಹೆದ್ದಾರಿ 66ರ ಕಟಪಾಡಿ ಕಲ್ಲಾಪು ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಕಮರಿಗೆ ಉರುಳಿ ಬಿದ್ದಿದ್ದು ಕಾರಿನಲ್ಲಿದ್ದವರು ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ.

ಕೇರಳ ನೋಂದಣಿ ಹೊಂದಿರುವ ಕಾರಿನಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಆರು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗುತ್ತಿದ್ದು, ಈ ಪೈಕಿ ಮಕ್ಕಳು ಮತ್ತು ಮಹಿಳೆಯರು ಗಾಯಗೊಂಡಿದ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ.

ಸ್ಥಳೀಯರು ಮತ್ತು ಸಾರ್ವಜನಿಕರು ಗಾಯಳುಗಳನ್ನು ಆಸ್ಪತ್ರೆಗೆ ಕರೆದೋಯ್ಯುವಲ್ಲಿ ಸಹಕರಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News