ಹೆಜಮಾಡಿ: ಸ್ಕೂಟರ್ ಮತ್ತು ಟ್ಯಾಂಕರ್ ನಡುವೆ ನಡೆದ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ಹೆಜಮಾಡಿ ಟೋಲ್ ಗೇಟ್ ಸಮೀಪ ನಡೆದಿದೆ.
ತೀರ್ಥಹಳ್ಳಿ ಮೂಲದ ಇವರಿಬ್ಬರು ತೆರಳುತ್ತಿದ್ದ ಸ್ಕೂಟರ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರಿಗೂ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪಡುಬಿದ್ರೆ ಠಾಣಾ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.
ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಜನ್ನಲ್ಲಿ ಲಭ್ಯವಾಗಬೇಕಿದೆ.



