Friday, December 8, 2023
Homeಸುದ್ದಿಕಾರ್ಕಳ: ತಾಯಿಯ ಸಾವಿನಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

ಕಾರ್ಕಳ: ತಾಯಿಯ ಸಾವಿನಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

ಕಾರ್ಕಳ: ತಾಯಿಯ ಮರಣದಿಂದ ಮನನೊಂದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಮುಡಾರು ಗ್ರಾಮದಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಪ್ರದೀಪ (32) ಆತ್ಮಹತ್ಯೆ ಮಾಡಿಕೊಂಡವರು.

8 ತಿಂಗಳ ಹಿಂದೆ ಇವರ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಾಯಿಯನ್ನು ಕಳೆದುಕೊಂಡ ಪ್ರದೀಪ ಇವರು ಮನನೊಂದು ಮಾ.9 ರಂದು ಬೆಳಿಗ್ಗೆ ತಮ್ಮ ವಾಸವ್ತವ್ಯದ ಮನೆಯೊಳಗೆ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮೃತರ ತಂದೆ ರಾಜು ಪೂಜಾರಿ ಅವರು ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News