Thursday, April 18, 2024
Homeಸುದ್ದಿಕರಾವಳಿಕಾಪು: ಖಾಸಗಿ ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು

ಕಾಪು: ಖಾಸಗಿ ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು

ಕಾಪು: ಖಾಸಗಿ ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಶಾಲಾ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ (13) ಮೃತ ವಿದ್ಯಾರ್ಥಿನಿ.

ಶನಿವಾರ ಬೆಳಗ್ಗೆ ಶಾಲೆಗೆ ಬರುತ್ತಿದ್ದ ಆಕೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಬಾಲಕಿಯ ತಲೆಗೆ ಏಟಾಗಿದ್ದು, ಗಂಭೀರ ಗಾಯಗೊಂಡಿರುವ ಆಕೆಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News