Wednesday, April 24, 2024
Homeಸುದ್ದಿರಾಷ್ಟ್ರೀಯನಾಟು ನಾಟು ಹಾಡಿಗೆ ಅತ್ಯುತ್ತಮ ಹಾಡು ಆಸ್ಕರ್‌ ಪ್ರಶಸ್ತಿ: ಪ್ರಧಾನಿ ಮೋದಿ ಅಭಿನಂದನೆ

ನಾಟು ನಾಟು ಹಾಡಿಗೆ ಅತ್ಯುತ್ತಮ ಹಾಡು ಆಸ್ಕರ್‌ ಪ್ರಶಸ್ತಿ: ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಎಸ್.ಎಸ್‌ ರಾಜಮೌಲಿ ನಿರ್ದೇಶನದ ಆರ್‌.ಆರ್‌.ಆರ್ ಸಿನಿಮಾದ ‘ನಾಟು’ ಹಾಡಿಗೆ ಆಸ್ಕರ್‌ ಪ್ರಶಸ್ತಿ ಒಲಿದಿದೆ.

ಅತ್ಯುತ್ತಮ ಮೂಲ ಹಾಡು ವಿಭಾಗದಲ್ಲಿ ಈ ಹಾಡು ಪ್ರಶಸ್ತಿ ಬಾಚಿಕೊಂಡಿದೆ. ಇದು ಈ ಚಿತ್ರಕ್ಕೆ ಲಭಿಸಿದ ಮೂರನೇ ಅಂತಾರಾಷ್ಟ್ರೀಯ ಗೌರವವಾಗಿದೆ. ಈ ಹಿಂದೆ ‌ಗೋಲ್ಡನ್‌ ಗ್ಲೋಬ್‌ ಹಾಗೂ ಕ್ರಿಟಿಕ್‌ ಚಾಯ್ಸ್‌ ಅವಾರ್ಡ್‌ಗೆ ಈ ಹಾಡು ಪಾತ್ರವಾಗಿತ್ತು. ಚಂದ್ರಬೋಸ್‌ ಬರೆದಿರುವ ಈ ಹಾಡಿಗೆ ಎಂ.ಎಂ ಕೀರವಾಣಿಯವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ಆಸ್ಕರ್‌ ಪ್ರಶಸ್ತಿ ಗೆದ್ದ ಆರ್‌ಆರ್‌ಆರ್‌ ಸಿನಿಮಾದ ‘ನಾಟು ನಾಟು‘ ಹಾಡು ಬರೆದಿದರುವ ಚಂದ್ರಬೋಸ್‌ ಹಾಗೂ ಸಂಗೀತ ಸಂಯೋಜಕ ಎಂ.ಎಂ ಕೀರವಾಣಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿಸಿದ್ದಾರೆ.

ಈ ಸಾಧನೆಯನ್ನು ಅಸಾಧಾರಣ ಎಂದು ಬಣ್ಣಿಸಿರುವ ಪ್ರಧಾನಿ ಮೋದಿ, ಇದು ಮುಂದಿನ ವರ್ಷಗಳಲ್ಲಿ ನೆನಪಿನಲ್ಲಿ ಉಳಿಯುವ ಹಾಡು ಎಂದು ಬಣ್ಣಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News