ಉಡುಪಿ: ಪಾಳು ಬಿದ್ದ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಉಡುಪಿ: ಕಲ್ಸಂಕ ಜಂಕ್ಷನ್ ಬಳಿ ಇರುವ ಪಾಳು ಬಿದ್ದ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಅನುಮಾನಸ್ಪದವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.

ಸುರತ್ಕಲ್ ಮೂಲದ 32 ವರ್ಷದ ವ್ಯಕ್ತಿಯ ಮೃತದೇಹ ಎನ್ನಲಾಗುತ್ತಿದ್ದು, ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ವ್ಯಕ್ತಿ ಆಯ ತಪ್ಪಿ ಬಿದ್ದು ಮೃತಪಟ್ಟಿರಬಹುದೇ ಅಥವಾ ಯಾರಾದರೂ ತಳ್ಳಿ ಕೊಲೆ ಮಾಡಿರಬಹುದೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನು ಮೃತದೇಹವನ್ನು ಅಜ್ಜರ ಕಾಡು ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಮೃತ ವ್ಯಕ್ತಿಯ ಪರಿಚಯಸ್ಥರು ಇದ್ದಲ್ಲಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಬಹುದು.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You cannot copy content from Baravanige News

Scroll to Top