Monday, May 27, 2024
Homeಸುದ್ದಿರಾಜ್ಯಮೊಬೈಲ್‌ನಲ್ಲಿ ಮಾತನಾಡುತ್ತಿರುವಾಗ ಹೃದಯಾಘಾತ : ವ್ಯಕ್ತಿ ಸಾವು

ಮೊಬೈಲ್‌ನಲ್ಲಿ ಮಾತನಾಡುತ್ತಿರುವಾಗ ಹೃದಯಾಘಾತ : ವ್ಯಕ್ತಿ ಸಾವು

ಹಾಸನ: ಮೊಬೈಲ್‌ ನಲ್ಲಿ ಮಾತನಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.

ಹೊಳೆನರಸೀಪುರದ ಕಾರ್ಯಾಲಯ ಬಡಾವಣೆಯ ನಿವಾಸಿ ವೀರೂಪಾಕ್ಷ (40) ಸಾವನ್ನಪ್ಪಿದ ವ್ಯಕ್ತಿ.

ಹಾಸನ ಜಿಲ್ಲೆ, ಹೊಳೆನರಸೀಪುರ ಪಟ್ಟಣದ ಅರಣ್ಯ ಕಚೇರಿ ಬಳಿ ಈ ಘಟನೆ ನಡೆದಿದ್ದು, ಘಟನೆಯ ಎಲ್ಲಾ ದೃಶ್ಯಗಳು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೀರೂಪಾಕ್ಷ ಅಂಗಡಿಯ ಮುಂಭಾಗದಲ್ಲಿ ಕುಳಿತು ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ. ಈ ವೇಳೆ ಹಠಾತ್‌ ಹೃದಯಾಘಾತವಾಗಿದೆ. ನೋಡ ನೋಡುತ್ತಿದ್ದಂತೆ ವೀರೂಪಾಕ್ಷ ಕುಸಿದು ಬಿದ್ದಿದ್ದಾರೆ.

ಈ ವೇಳೆ ಅಲ್ಲಿದ್ದ ಸ್ಥಳೀಯರು ವೀರೂಪಾಕ್ಷ ರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಆದರೆ ವಿರೂಪಾಕ್ಷ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News