Thursday, April 25, 2024
Homeಸುದ್ದಿರಾಜ್ಯಕರ್ನಾಟಕದಲ್ಲಿ ಕೋವಿಡ್ ಹೆಚ್ಚಳ ; 500ರ ಗಡಿ ದಾಟಿದ ಸೋಂಕಿನ ಪ್ರಕರಣ : ಹೆಚ್ಚಿದ ಆತಂಕ

ಕರ್ನಾಟಕದಲ್ಲಿ ಕೋವಿಡ್ ಹೆಚ್ಚಳ ; 500ರ ಗಡಿ ದಾಟಿದ ಸೋಂಕಿನ ಪ್ರಕರಣ : ಹೆಚ್ಚಿದ ಆತಂಕ

ಕರ್ನಾಟಕದಲ್ಲಿ ಕೊರೊನಾ ಸೋಂಕು ಕಡಿಮೆಯಾಗಿದೆ ಎಂದು ಅಂದುಕೊಳ್ಳುವಷ್ಟರಲ್ಲೇ ಆಘಾತಕಾರಿ ಅಂಶವೊಂದು ಬಹಿರಂಗವಾಗಿದೆ. ಕೊರೊನಾ ಸೋಂಕು ಪ್ರಕರಣಗಳು ನಿಧಾನವಾಗಿ ದಿನದಿಂದ ದಿನಕ್ಕೆ ಏರುತ್ತಿವೆ. ರಾಜ್ಯ ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ ಮಾರ್ಚ್ 13ರ ವರೆಗೆ 510 ಜನರಿಗೆ ಕೊರೊನಾ ಸೋಂಕು ತಗುಲಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 62 ಜನರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ದಿನದ ಏರಿಕೆ ಶೇ 4.5 ರಷ್ಟಿದ್ದು, ವಾರದ ಏರಿಕೆ ಶೇ 2.60 ರಷ್ಟಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏರುತ್ತಿರವುದನ್ನು ಕಾಣುತ್ತಿದ್ದೇವೆ. ಆಸ್ಪತ್ರೆಗೆ ದಾಖಲಾಗುವ ಹೆಚ್ಚಿನ ಕೊರೊನಾ ರೋಗಿಗಳು ಒಂದೇ ಸಮಯದಲ್ಲಿ ವಿವಿಧ ರೋಗಗಳಿಂದ ಬಳಲುತ್ತಿದ್ದಾರೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ವಿಶೇಷ ಆಯುಕ್ತ ಡಾ.ಕೆ.ವಿ ತ್ರಿಲೋಕ್ ಚಂದ್ರ ಹೇಳಿದ್ದಾರೆ.

ಕಳೆದ 113 ದಿನಗಳಲ್ಲಿ ರಾಜ್ಯದಲ್ಲಿ ಮೊದಲ ಬಾರಿಗೆ 500 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಸೋಂಕಿನ ಪ್ರಕರಣ ಏರುತ್ತಿರುವುದು ಕಾಣಬಹುದಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚಿನ ಜನರು ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವುದು ಆಘಾತಕಾರಿ ಅಂಶವಾಗಿದೆ. ಮತ್ತು ಬೇರೆ ರಾಜ್ಯಗಳಲ್ಲೂ ಕೊರೊನಾ ಪ್ರಕರಣಗಳು ಏರುತ್ತಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆ ಆಯುಕ್ತ ಡಿ ರಂದೀಪ್ ಹೇಳಿದರು.

ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಡಿಸೆಂಬರ್ 2022 ರಲ್ಲಿ 3 ಪ್ರಕರಣಗಳು ವರದಿಯಾಗಿದ್ದವು. ಜನವರಿ 2023ರಲ್ಲಿ 6 ಪ್ರಕರಣಗಳು ಮತ್ತು ಫೆಬ್ರವರಿಯಲ್ಲಿ 4 ಪ್ರಕರಣಗಳು ಪತ್ತೆಯಾಗಿದ್ದವು. ಆದರೆ ಮಾರ್ಚ್ ಮೊದಲ 10 ದಿನಗಳಲ್ಲಿ ಈಗಾಗಲೇ 2 ಪ್ರಕರಣಗಳು ವರದಿಯಾಗಿವೆ ಎಂದು ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕ ಡಾ. ಹೆಚ್.ವಿ ಮನೋಜ್ ಕುಮಾರ್ ತಿಳಿಸಿದ್ದಾರೆ.

ಹೆಚ್ಚಿದ ಪ್ರಯಾಣ, ಮಾಸ್ಕ್‌ ಬಳಕೆ ಮಾಡದಿರುವುದು, ಕೊರೊನಾ ಲಿಸಿಕೆ ಪಡೆಯುವರ ಸಂಖ್ಯೆಯಲ್ಲಿ ಇಳಿಕೆ ಮತ್ತು ಹೆಚ್ಚಿದ ಕೊರೊನಾ ಪರೀಕ್ಷೆಯಿಂದ, ಪ್ರಕರಣಗಳು ಹಠಾತ್ತನೆ ಹೆಚ್ಚಿವೆ ಎಂದು ಬೆಂಗಳೂರಿನ ಆಸ್ಟರ್ ಸಿಎಂಐ ಆಸ್ಪತ್ರೆಯ ಸಾಂಕ್ರಾಮಿಕ ರೋಗಗಳು ಮತ್ತು ಟ್ರಾವೆಲ್ ಮೆಡಿಸಿನ್ ಸಲಹೆಗಾರರಾದ ಡಾ. ಸ್ವಾತಿ ರಾಜಗೋಪಾಲ್ ಅಭಿಪ್ರಾಯ ವ್ಯಕ್ತಪಡಿಸಿದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News