ಉಡುಪಿ: ಕಿನ್ನಿಮೂಲ್ಕಿ ಬಳಿ ಗುಜರಿ ಅಂಗಡಿಯಲ್ಲಿ ಬೆಂಕಿ ಆಕಸ್ಮಿಕ; ಲಕ್ಷಾಂತರ ರೂ ನಷ್ಟ…!!

ಉಡುಪಿ: ಗುಜರಿ ಅಂಗಡಿಯಲ್ಲಿ ದಾಸ್ತಾನು ಇರಿಸಿದ್ದ ಪ್ಲಾಸ್ಟಿಕ್ ಮತ್ತು ಇನ್ನಿತರ ಗುಜರಿ ವಸ್ತುಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಇಲ್ಲಿನ ಕಿನ್ನಿಮೂಲ್ಕಿ ಗೋಪುರ ಸಮೀಪದಲ್ಲಿರುವ ಗುಜರಿ ಅಂಗಡಿಯಲ್ಲಿ ತಡರಾತ್ರಿ ಈ ಬೆಂಕಿ ಅವಘಡ ಸಂಭವಿಸಿದೆ.

ಬೆಂಕಿಯ ಜ್ವಾಲೆ ನೋಡಿದ ಸ್ಥಳೀಯ ಮನೆಯವರು ಅಗ್ನಿಶಾಮದಳಕ್ಕೆ ಮಾಹಿತಿ ನೀಡಿದ್ದಾರೆ.ಕೂಡಲೇ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮದಳದ ಸಿಬ್ಬಂದಿಗಳು ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ.

ಆಕಸ್ಮಿಕ ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ,

You cannot copy content from Baravanige News

Scroll to Top