Saturday, April 20, 2024
Homeಸುದ್ದಿಕಾಪು: ಬಟ್ಟೆ ಮಳಿಗೆಯಿಂದ ಲಕ್ಷಾಂತರ ರೂ. ನಗದು ದೋಚಿ ಪರಾರಿಯಾದ ಖದೀಮರು..!!

ಕಾಪು: ಬಟ್ಟೆ ಮಳಿಗೆಯಿಂದ ಲಕ್ಷಾಂತರ ರೂ. ನಗದು ದೋಚಿ ಪರಾರಿಯಾದ ಖದೀಮರು..!!

ಕಾಪು(ಮಾ.16): ಉದ್ಯಾವರದ ಬಟ್ಟೆ ಮಳಿಗೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ ನಗದು ದೋಚಿ ಪರಾರಿಯಾದ ಘಟನೆ ಬುಧವಾರ ನಡೆದಿದೆ.

ವಾಶ್ ರೂಂಗೆ ಅಳವಡಿಸಿದ ಎಕ್ಸಾಸ್ಟ್ ಫ್ಯಾನ್ ಅನ್ನು ಕಿತ್ತು ಅದರ ಮೂಲಕ ಒಳ ಪ್ರವೇಶಿಸಿದ್ದ ಕಳ್ಳರು ಸೇಫ್ ಲಾಕರ್ ಅನ್ನು ತೆರೆದು ಅದರಲ್ಲಿದ್ದ 60 ಲಕ್ಷ ರೂಪಾಯಿ ನಗದು ಹಣವನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News