Saturday, July 27, 2024
Homeಸುದ್ದಿವಿಶ್ವಸಂಸ್ಥೆಯಲ್ಲಿ ಮೊಳಗಿದ ಕನ್ನಡ ಡಿಂಡಿಮ; ಕನ್ನಡದಲ್ಲೇ ಭಾಷಣ ಮಾಡಿದ ರಿಷಬ್ ಶೆಟ್ಟಿ; ಅರ್ಧದಲ್ಲೇ ಭಾಷಣಕ್ಕೆ ಬ್ರೇಕ್

ವಿಶ್ವಸಂಸ್ಥೆಯಲ್ಲಿ ಮೊಳಗಿದ ಕನ್ನಡ ಡಿಂಡಿಮ; ಕನ್ನಡದಲ್ಲೇ ಭಾಷಣ ಮಾಡಿದ ರಿಷಬ್ ಶೆಟ್ಟಿ; ಅರ್ಧದಲ್ಲೇ ಭಾಷಣಕ್ಕೆ ಬ್ರೇಕ್

ನಟ ನಿರ್ದೇಶಕ ರಿಷಬ್ ಶೆಟ್ಟಿ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಕನ್ನಡದಲ್ಲಿ ಭಾಷಣ ಮಾಡಿದ್ದಾರೆ. ಆದರೆ, ತಾಂತ್ರಿಕ ಸಮಸ್ಯೆಯಿಂದಾಗಿ ಅವರ ಭಾಷಣವನ್ನು ಮೊಟಕುಗೊಳಿಸಲಾಗಿದೆ.

ವಿಶ್ವಸಂಸ್ಥೆಯ ವಾರ್ಷಿಕ ಸಭೆಯ ಮಾನವ ಹಕ್ಕು ಸಂರಕ್ಷಣೆ ಪರಿಷತ್ತಿನ 28ನೇ ಸಭೆಯಲ್ಲಿ ಪರಿಸರ ಸಂರಕ್ಷಣೆ ವಿಷಯವಾಗಿ ರಿಷಬ್ ಶೆಟ್ಟಿಯವರು ಭಾಷಣ ಮಾಡಿದರು. ಕನ್ನಡಿಗ ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿ ತನ್ನ ಮಾತೃ ಭಾಷೆಯ ಕಂಪನ್ನು ಪಸರಿಸಿದ್ದಾರೆ. ಆದರೆ ಅವರ ಭಾಷಣ ಇಂಗ್ಲೀಷ್ ಅಥವಾ ಇನ್ನಾವುದೇ ಭಾಷೆಗೆ ತರ್ಜುಮೆ ಆಗದ ಕಾರಣ ಅವರ ಭಾಷಣವನ್ನು ಆರಂಭದಲ್ಲಿಯೇ ಮೊಟಕುಗೊಳಿಸಲಾಗಿದೆ.

ವಿಶ್ವಸಂಸ್ಥೆಯ ಸಭೆಯಲ್ಲಿ ಯಾವುದೇ ಭಾಷೆಯಲ್ಲಿ ಭಾಷಣ ಮಾಡುವ ಅವಕಾಶವಿದೆ. ಆದರೆ ಭಾಷಣವನ್ನು ಇಂಗ್ಲೀಷ್ ಸೇರಿದಂತೆ ವಿಶ್ವಸಂಸ್ಥೆಯ ಅನುಮೋದನೆ ಇರುವ ಕೆಲವು ಭಾಷೆಗಳಿಗೆ ತರ್ಜುಮೆ ಮಾಡಿ ಪ್ರಸಾರ ಮಾಡುವ ಅವಕಾಶವಿದೆ. ಆದರೆ ರಿಷಬ್ ಶೆಟ್ಟಿ ಕನ್ನಡದಲ್ಲಿ ಮಾಡಿದ ಭಾಷಣವನ್ನು ತರ್ಜುಮೆ ಮಾಡುವ ಅವಕಾಶವಿರಲಿಲ್ಲ. ತಾಂತ್ರಿಕ ಕಾರಣದಿಂದಾಗಿ ಅವರ ಭಾಷಣ ತರ್ಜುಮೆಯಾಗಿರಲಿಲ್ಲ. ಹೀಗಾಗಿ ಅವರ ಭಾಷಣಕ್ಕೆ ಬ್ರೇಕ್ ಹಾಕಲಾಗಿದೆ. ಹೀಗಾಗಿ ರಿಷಬ್ ಶೆಟ್ಟಿಯವರ ವಿಶ್ವಸಂಸ್ಥೆ ಭಾಷಣ ಕೇವಲ ಹನ್ನೆರಡು ಸೆಕೆಂಡ್​ಗಳಿಗಷ್ಟೆ ಸೀಮಿತವಾಯಿತು.

ಆದರೂ ವಿಶ್ವಸಂಸ್ಥೆಯ ವೇದಿಕೆಯಲ್ಲಿ ಕನ್ನಡ ದನಿ ಪಸರಿಸುವ ಕಾರ್ಯವನ್ನು ರಿಷಬ್ ಶೆಟ್ಟಿ ಮಾಡಿದರು. ಈ ಬಾರಿ ಪಂಚೆಯಲ್ಲಲ್ಲದೆ, ಸರಳ ಭಾರತೀಯ ಉಡುಗೆ ಬಿಳಿಯ ಬಣ್ಣದ ಖುರ್ತಾ ಧರಿಸಿ ಅದಕ್ಕೊಪ್ಪುವ ನೀಲಿ ಬಣ್ಣದ ವೇಸ್ ಕೋಟು ಧರಿಸಿದ್ದ ರಿಷಬ್ ಶೆಟ್ಟಿ, ಉತ್ಸಾಹದಿಂದ, ಆತ್ಮವಿಶ್ವಾಸದಿಂದ ಭಾಷಣ ಆರಂಭಿಸಿದರು. ವಿಶ್ವಸಂಸ್ಥೆಯ ಸಭೆಯಲ್ಲಿ ಭಾಷಣಕಾರರಿಗೆ ಸೀಮಿತ ಸಮಯ ನೀಡುವ ಕಾರಣ, ತುಸು ವೇಗವಾಗಿ ಭಾಷಣ ಓದಲು ಆರಂಭಿಸಿದ ರಿಷಬ್, ”ನಮಸ್ಕಾರ ನಾನು ರಿಷಬ್ ಶೆಟ್ಟಿ. ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತಲೂ ಹೆಚ್ಚು ಕಾಲದಿಂದ ತಳಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತದ ಇಕೋಫಾರ್ಮ್ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ಪರಿಸರ ಸ್ವಚ್ಛತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ, ನಿರ್ದೇಶಕನಾಗಿ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದು ನನ್ನ ಉದ್ದೇಶ” ಎಂದರು.

ಇಷ್ಟು ಮಾತುಗಳು ಇಂಗ್ಲಿಷ್ ಭಾಷೆಗೆ ಭಾಷಾಂತರ ಮಾಡುವ ಅವಕಾಶವಿಲ್ಲದ ಹಿನ್ನೆಲೆಯಲ್ಲಿ ಭಾಷಣವನ್ನು ಅನಿವಾರ್ಯವಾಗಿ ಮೊಟಕುಗೊಳಿಸಬೇಕಾಯಿತು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News