ವಿವಾದಾತ್ಮಕ ಟ್ವೀಟ್ – ನಟ ಚೇತನ್ ಅರೆಸ್ಟ್

ಬೆಂಗಳೂರು (ಮಾ 21): ಧರ್ಮದ ಕುರಿತು ವಿವಾದಾತ್ಮಕ ಟ್ವೀಟ್ ಮಾಡಿರುವ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರನ್ನು ಶೇಷಾದ್ರಿಪುರ ಪೊಲೀಸರು ಬಂಧಿಸಿದ್ದಾರೆ.

ಶಿವಕುಮಾರ್ ಎನ್ನುವವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಚೇತನ್ ಅವರ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

“ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಇದು ಒಂದು ಸುಳ್ಳು.1992ರಲ್ಲಿ: ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ ಇದು ಒಂದು ಸುಳ್ಳು.ಈಗ 2023ರಲ್ಲಿ: ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು- ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು `ಸತ್ಯವೇ ಸಮಾನತೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

You cannot copy content from Baravanige News

Scroll to Top