Saturday, June 15, 2024
Homeಸುದ್ದಿಅಯೋಧ್ಯಾ ರಾಮ ಮಂದಿರ ನಿರ್ಮಾಣ ಕಾರ್ಯದ ಪ್ರಗತಿ ಪರಿಶೀಲನೆ ನಡೆಸಿದ ಪೇಜಾವರ ಶ್ರೀ

ಅಯೋಧ್ಯಾ ರಾಮ ಮಂದಿರ ನಿರ್ಮಾಣ ಕಾರ್ಯದ ಪ್ರಗತಿ ಪರಿಶೀಲನೆ ನಡೆಸಿದ ಪೇಜಾವರ ಶ್ರೀ

ಉಡುಪಿ ಮಾ.21: ಅಯೋಧ್ಯಾ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರಾಗಿರುವ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಂಗಳವಾರ ಅಯೋಧ್ಯೆಗೆ ಭೇಟಿ ನೀಡಿ ರಾಮ ಮಂದಿರ ನಿರ್ಮಾಣ ಕಾರ್ಯದ ಪ್ರಗತಿ ಪರಿಶೀಲನೆ ನಡೆಸಿದರು.

ಈ ವೇಳೆ ಅಲ್ಲಿನ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ ಶ್ರೀಗಳು, ಮಂದಿರ ನಿರ್ಮಾಣ ಕಾರ್ಯ ವೇಗದಿಂದ ನಡೆಯುತ್ತಿದ್ದು ಪ್ರಸ್ತುತ ಗರ್ಭಗುಡಿಯ ಉಭಾಪೀಠದ ಮೇಲೆ ಸ್ತಂಭಗಳನ್ನು ಜೋಡಣೆ ಮತ್ತು ಗೋಡೆ ನಿರ್ಮಾಣ ನಡೆಯುತ್ತಿದೆ ಮುಂದಿನ ಹತ್ತು ದಿನಗಳಲ್ಲಿ ಮೇಲ್ಬಾವಣಿಯ ಶಿಲಾ ಬೀಮ್ ಮತ್ತು ಶಿಲಾ ಹೊದಿಗೆಗಳನ್ನು ಅಳವಡಿಸುವ ಕಾರ್ಯ ಆರಂಭವಾಗಲಿದೆ. ಮಂದಿರದ ಲೋಕಾರ್ಪಣೆಯ ವೇಳೆಗೆ ದೇಶಾದ್ಯಂತದಿಂದ ಆಗಮಿಸುವ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ 25000 ಜನರ ವಸತಿ ಸಾಮಥ್ಯದ ಬೃಹತ್ ಯಾತ್ರಿ ಭವನ ನಿರ್ಮಿಸಲಾಗುತ್ತಿದೆ ಎಂದರು.

ಹಾಗೂ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗುವ ಶ್ರೀ ರಾಮ ಲಕ್ಷ್ಮಣ ಸೀತೆಯ ವಿಗ್ರಹಗಳ ನಿರ್ಮಾಣಕ್ಕಾಗಿ ಕರ್ನಾಟಕದ ಹೆಗ್ಗಡೆ ದೇವನಕೋಟೆ, ಕಾರ್ಕಳ, ತಮಿಳುನಾಡಿನ ಮಹಾಬಲಿ ಪುರಂ, ರಾಜಸ್ಥಾನ ಹಾಗೂ ನೇಪಾಳಗಳಿಂದ ಶಿಲೆಗಳನ್ನು ತರಲಾಗಿದ್ದು ಶಿಲ್ಪಿಗಳು ಅವುಗಳ ಪರಿಶೀಲನೆ ನಡೆಸಿ ಉತ್ತಮವಾದವುಗಳನ್ನು ಆಯ್ದುಕೊಂಡು ಪ್ರತಿಮೆಗಳನ್ನಯ ನಿರ್ಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್, ವಿ.ಹಿಂ.ಪ ಮುಖಂಡ ಗೋಪಾಲ್ ಜೀ, ಶ್ರೀಗಳ ಆಪ್ತ ಕಾರ್ಯದರ್ಶಿ ಕೃಷ್ಣ ಭಟ್, ಅಯೋಧ್ಯೆ ಪೇಜಾವರ ಮಠದ ವ್ಯವಸ್ಥಾಪಕ ಮಹೇಂದ್ರ ದುಬೆ ಉಪಸ್ಥಿತರಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News