ಕನ್ನಡಿಗರಿಗೆ ಕನ್ನಡದಲ್ಲೇ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ಮೋದಿ

ನಾಡಿನಾದ್ಯಂತ ಜನರು ಯುಗಾದಿ ಹಬ್ಬ ಸಂತಸದಲ್ಲಿದ್ದಾರೆ. ಮನೆ ಮನೆಯಲ್ಲೂ ಈ ಹಬ್ಬವನ್ನು ಆಚರಿಸುತ್ತಿದ್ದಾರೆ. ಅದರಂತೆಯೇ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಯುಗಾದಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲೇ ಟ್ವೀಟ್​ ಮಾಡುವ ಮೂಲಕ ಪ್ರಾರ್ಥಿಸಿದ್ದಾರೆ. ಈ ವಿಚಾರ ಕನ್ನಡಿಗರ ಸಂತಸವನ್ನು ಮತ್ತಷ್ಟು ಹೆಚ್ಚಿಸಿದೆ.

ಮೋದಿ ಅವರು ಟ್ವೀಟ್​ನಲ್ಲಿ ಎಲ್ಲರಿಗೂ ಸಂತಸದ ಯುಗಾದಿಯ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಭರವಸೆ ಮತ್ತು ಹೊಸ ಆರಂಭಗಳನ್ನು ಒಳಗೊಂಡ ಈ ಹಬ್ಬವು, ಮುಂಬರುವ ವರ್ಷದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಅಪಾರ ಸಂತೋಷ ಮತ್ತು ಉತ್ತಮ ಆರೋಗ್ಯ ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಬರೆದಿದ್ದಾರೆ.

ಇವಿಷ್ಟು ಮಾತ್ರವಲ್ಲದೆ, ಮೋದಿ ತಮಿಳು ಭಾಷಿಗರಿಗೆ, ತೆಲುಗು ಭಾಷಿಗರಿಗೆ ಯುಗಾದಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.

You cannot copy content from Baravanige News

Scroll to Top