Saturday, July 27, 2024
Homeಸುದ್ದಿಉಡುಪಿ: ಮನೆಗೆ ನುಗ್ಗಿ ನಗದು ಹಾಗೂ ಚಿನ್ನಾಭರಣ ಕಳವುಗೈದ ಪ್ರಕರಣ; ಆರೋಪಿಗೆ 5 ವರ್ಷಗಳ ಕಠಿಣ...

ಉಡುಪಿ: ಮನೆಗೆ ನುಗ್ಗಿ ನಗದು ಹಾಗೂ ಚಿನ್ನಾಭರಣ ಕಳವುಗೈದ ಪ್ರಕರಣ; ಆರೋಪಿಗೆ 5 ವರ್ಷಗಳ ಕಠಿಣ ಸಜೆ ಹಾಗೂ ದಂಡ

ಉಡುಪಿ, ಮಾ.24: ಮನೆಗೆ ನುಗ್ಗಿ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

2022 ಜೂನ್ 29 ರಂದು ರಾತ್ರಿ ಸುಖೇಶ್ ನಾಯ್ಕ್ ಎಂಬಾತನು ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಸಾಯಿಬಾಬ ನಗರದ ಅಡ್ಡ ರಸ್ತೆಯಲ್ಲಿರುವ ಸತ್ಯನಾರಾಯಣ ಹೆಗ್ಡೆ ಇವರ ಮನೆಗೆ ನುಗ್ಗಿ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಾಗೂ ಬೆಳ್ಳಿಯ ಪದಕಗಳನ್ನು ಕಳವು ಮಾಡಿರುವ ಹಿನ್ನೆಲೆ, ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ, ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್. ನ್ಯಾಯಾಲಯದ ನ್ಯಾಯಾಧೀಶೆ ಶಕುಂತಲಾ ಅವರು ಆರೋಪಿ ಸುಖೇಶ್ ನಾಯ್ಕ್ ಗೆ 5 ವರ್ಷಗಳ ಕಠಿಣ ಸಜೆ ಮತ್ತು ರೂ. 5000 ದಂಡ, ಕಲಂ: 380 ರಡಿ 5 ವರ್ಷಗಳ ಕಠಿಣ ಸಜೆ ಮತ್ತು ರೂ. 5000 ದಂಡ ಸೇರಿದಂತೆ ಒಟ್ಟು 10,000 ರೂ. ದಂಡ ಹಾಗೂ 10 ವರ್ಷಗಳ ಕಠಿಣ ಕಾರಾಗೃಹ ವಾಸ ಶಿಕ್ಷೆ, ದಂಡ ಪಾವತಿಸಲು ತಪ್ಪಿದಲ್ಲಿ 1 ವರ್ಷದ ಸಾಧಾರಣಾ ಶಿಕ್ಷೆ ವಿಧಿಸಿ, ತೀರ್ಪು ನೀಡಿರುತ್ತಾರೆ.

ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕಿ ಜಯಂತಿ ಕೆ ವಾದ ಮಂಡಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News