Saturday, July 27, 2024
Homeಸುದ್ದಿಆಧಾರ್- ಪಾನ್ ಜೋಡಣೆಯ ಗಡುವು ವಿಸ್ತರಣೆ

ಆಧಾರ್- ಪಾನ್ ಜೋಡಣೆಯ ಗಡುವು ವಿಸ್ತರಣೆ

ಕೊನೆಯ ದಿನ ಸಮೀಪಿಸುತ್ತಿದ್ದರೂ ಪಾನ್ ಮತ್ತು ಆಧಾರ್ ಕಾರ್ಡ್‌ಗಳನ್ನು ಜೋಡಣೆ ಮಾಡಲಾಗದೆ ಪರದಾಡುತ್ತಿದ್ದ ಜನಸಾಮಾನ್ಯರಿಗೆ ನೆಮ್ಮದಿಯ ಸುದ್ದಿ ಬಂದಿದೆ. ಈ ಎರಡೂ ಗುರುತಿನ ಕಾರ್ಡ್‌ಗಳನ್ನು ಜೋಡಿಸಲು ಇರುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ 2023ರ ಜೂನ್ 30ರವರೆಗೂ ವಿಸ್ತರಿಸಿದೆ.

ಈ ಮೊದಲು 1 ಸಾವಿರ ರೂ ದಂಡ ಸಹಿತವಾಗಿ ಆಧಾರ್ ಹಾಗೂ ಪಾನ್ ಕಾರ್ಡ್ ಜೋಡಣೆಗೆ 2023ರ ಮಾರ್ಚ್ 31ರವರೆಗೆ ಸಮಯ ನೀಡಲಾಗಿತ್ತು. ಕೊನೆಯ ದಿನ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧದ ಜನರ ಆಕ್ರೋಶ ತೀವ್ರಗೊಂಡಿತ್ತು. ಜತೆಗೆ ಜೋಡಣೆಗೆ ವೇದಿಕೆಯಾಗಿರುವ ಆದಾಯ ತೆರಿಗೆ ಪೋರ್ಟಲ್‌ನಲ್ಲಿನ ಈ ವಿಭಾಗ ತೆರೆದುಕೊಳ್ಳುತ್ತಲೇ ಇರಲಿಲ್ಲ. ಈ ತಾಂತ್ರಿಕ ದೋಷದ ಬಗ್ಗೆ ಅನೇಕರು ದೂರು ನೀಡಿದ್ದರು.

ಈಗ ದಿನಾಂಕವನ್ನು ಜೂನ್ 30ರವರೆಗೂ ವಿಸ್ತರಣೆ ಮಾಡಲಾಗಿದೆ ಎಂದು ನೇರ ತೆರಿಗೆಗಳ ಕೇಂದ್ರ ಮಂಡಳಿ (ಸಿಬಿಡಿಟಿ) ಮಂಗಳವಾರ ಹೇಳಿಕೆ ಬಿಡುಗಡೆ ಮಾಡಿದೆ. ಈ ಸಂಬಂಧ ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News