Saturday, July 27, 2024
Homeಸುದ್ದಿಉಡುಪಿ: ಆಟೋ ರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್‌ಗಳ ತೆರವಿಗೆ ಸೂಚನೆ

ಉಡುಪಿ: ಆಟೋ ರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್‌ಗಳ ತೆರವಿಗೆ ಸೂಚನೆ

ಉಡುಪಿ,ಏ.03: ಜಿಲ್ಲೆಯ ಎಲ್ಲಾ ಆಟೋರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್‌ಗಳನ್ನು ತೆರವುಗೊಳಿಸಬೇಕು ಮತ್ತು ಯಾವುದೇ ರೀತಿಯ ರಾಜಕೀಯ ಸಂಬಂಧಿತ ಪೋಸ್ಟರ್‌ಗಳನ್ನು ಅಳವಡಿಸದಂತೆ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ವಿಧಾನ ಸಭೆ ಚುನಾವಣೆ – 2023 ಕ್ಕೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇನ್ನು ತಪ್ಪಿದ್ದಲ್ಲಿ ಅಂತಹ ವಾಹನಗಳ ಪರವಾನಿಗೆಯನ್ನು ರದ್ದುಗೊಳಿಸಿ, ಎಫ್ಐಆರ್‌ ದಾಖಲಿಸಲು ಶಿಫಾರಸು ಮಾಡಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News