Saturday, June 15, 2024
Homeಸುದ್ದಿಕರಾವಳಿಕೋಳಿ ಪದಾರ್ಥ ವಿಚಾರದಲ್ಲಿ ತಂದೆಯಿಂದಲೇ ಮಗನ ಕೊಲೆ..!!

ಕೋಳಿ ಪದಾರ್ಥ ವಿಚಾರದಲ್ಲಿ ತಂದೆಯಿಂದಲೇ ಮಗನ ಕೊಲೆ..!!

ದಕ್ಷಿಣ ಕನ್ನಡ (ಏ.5) : ತಂದೆ ಮಗನನ್ನು ಕ್ಷುಲಕ ಕಾರಣಕ್ಕೆ ಕೊಲೆ ಮಾಡಿದ ಘಟನೆ ಕಳೆದ ರಾತ್ರಿ ಸುಳ್ಯ ತಾಲೂಕಿನಲ್ಲಿ ನಡೆದಿದೆ.

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಏರಣಗುಡ್ಡೆ ಎಂಬಲ್ಲಿ ಶಿವರಾಮ (32) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.ನಿನ್ನೆ ರಾತ್ರಿ ಮನೆಯಲ್ಲಿ ಕೋಳಿ ಪದಾರ್ಥ ಮಾಡಲಾಗಿತ್ತು.ಮಗ ಶಿವರಾಮ ರಾತ್ರಿ ಮನೆಗೆ ಬರುವಾಗ ಕೋಳಿ ಪದಾರ್ಥ ಖಾಲಿ ಆಗಿತ್ತೆನ್ನಲಾಗಿದೆ.ಈ ವೇಳೆ ಕೋಳಿ ಪದಾರ್ಥ ಖಾಲಿಯಾಯಿತು ಎಂಬ ಕಾರಣದಿಂದ ನಡೆದ ಜಗಳ ಮಾತಿಗೆ ಮಾತು ಬೆಳೆದು ತಾರಕಕ್ಕೇರಿತು.ಬಳಿಕ ಕೋಪಗೊಂಡ ತಂದೆ ಶೀನ ಮಗ ಶಿವರಾಮನಿಗೆ ಬಡಿಗೆಯಿಂದ ಮಗನ ತಲೆಗೆ ಹೊಡೆದರೆನ್ನಲಾಗಿದೆ. ಬಲವಾದ ಏಟು ಬಿದ್ದು ಶಿವರಾಮ ಅವರು ಅಲ್ಲೇ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಏಟು ಬಲವಾಗಿ ಬಿದ್ದ ಪರಿಣಾಮ ತಲೆ ಒಡೆದು ಸ್ಥಳದಲ್ಲೇ ಕುಸಿದು ಬಿದ್ದು ಸಾವನಪ್ಪಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದು ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿ ಶೀನನನ್ನು ಬಂಧಿಸಿದ್ದಾರೆ. ಶಿವರಾಮರ ಮೃತ ದೇಹವನ್ನು ಕಡಬ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.ಶಿವರಾಮ ಕೂಲಿ ಕೆಲಸಕ್ಕೆ ಹೋಗುತ್ತಿದ್ದು, ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News