Monday, April 22, 2024
Homeಸುದ್ದಿಕಾಮನ್ವೆಲ್ತ್ ಗೇಮ್ಸ್ ವೇಯ್ಟ್ ಲಿಫ್ಟಿಂಗ್: ಕುಂದಾಪುರದ ಗುರುರಾಜ ಪೂಜಾರಿಯವರಿಗೆ ಒಲಿದ ಕಂಚಿನ ಪದಕ

ಕಾಮನ್ವೆಲ್ತ್ ಗೇಮ್ಸ್ ವೇಯ್ಟ್ ಲಿಫ್ಟಿಂಗ್: ಕುಂದಾಪುರದ ಗುರುರಾಜ ಪೂಜಾರಿಯವರಿಗೆ ಒಲಿದ ಕಂಚಿನ ಪದಕ

ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು 61 ಕೆಜಿ ವಿಭಾಗದ ವೇಯ್ಟ್ ಲಿಫ್ಟಿಂಗ್ ನಲ್ಲಿ ಕನ್ನಡಿಗ ಗುರುರಾಜ ಪೂಜಾರಿ ಕಂಚಿನ ಪದಕ ಗೆದ್ದಿದ್ದಾರೆ.

ಪುರುಷರ 61 ಕೆಜಿ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಒಟ್ಟು 269 ಕೆಜಿ ಭಾರ ಎತ್ತುವ ಮೂಲಕ ಮೂಲಕ ಮತ್ತೊಮ್ಮೆ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಗುರುರಾಜ್ ಈ ಮೊದಲು 2018ರಲ್ಲಿ ನಡೆದ ಗೋಲ್ಡ್‌ಕೋಸ್ಟ್‌ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದರು.

ಇನ್ನು 55 ಕೆಜಿ ವಿಭಾಗದ ಕ್ಲೀನ್ ಆಂಡ್ ಜರ್ಕ್ ವಿಭಾಗದಲ್ಲಿ 248 ಕೆಜಿ ಭಾರ ಎತ್ತುವ ಮೂಲಕ 21 ವರ್ಷದ ಸಂಕೇತ್ ಬೆಳ್ಳಿ ಪದಕಕ್ಕೆ ಮುತ್ತಿಟ್ಟರು. ಇದು ಭಾರತದ ಮೊದಲ ಪದಕ ಬೇಟೆಯಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News