Tuesday, June 18, 2024
Homeಸುದ್ದಿಉಡುಪಿ: ಮನೆಯಂಗಳದಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿಗಾಹುತಿ

ಉಡುಪಿ: ಮನೆಯಂಗಳದಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿಗಾಹುತಿ

ಉಡುಪಿ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ದ್ವಿಚಕ್ರ ವಾಹನದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ದ್ವಿಚಕ್ರ ವಾಹನ ಸುಟ್ಟು ಕರಕಲಾದ ಘಟನೆ ಉಡುಪಿಯ ಶಂಕರಪುರ ಎಂಬಲ್ಲಿ ನಡೆದಿದೆ.

ಶಂಕರಪುರದ ಅರ್ಶಿಕಟ್ಟೆಯಲ್ಲಿ ಈ ಅವಘಡ ಸಂಭವಿಸಿದೆ.

ಜೋಸೆಫ್ ಲೋಬೋ ಎಂಬುವವರಿಗೆ ಸೇರಿದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಇದಾಗಿದ್ದು, ಬೆಂಕಿಯ ಕೆನ್ನಾಲಗೆಗೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿ ಹೋಗಿದೆ.

ಒಂದು ವರ್ಷದ ಹಿಂದೆ ಈ ಎಲೆಕ್ನಿಕ್ ದ್ವಿಚಕ್ರ ವಾಹನವನ್ನು ಖರೀದಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ದ್ವಿಚಕ್ರವಾಹನ ಸುಟ್ಟು ಕರಕಲಾಗುತ್ತಿರುವ ವಿಡಿಯೋ ವೈರಲ್ ಆಗ್ತಾ ಇದೆ.ಕಾಪು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News