Monday, April 22, 2024
Homeಸುದ್ದಿರಾಜ್ಯಚುನಾವಣಾ ರಾಜಕಾರಣಕ್ಕೆ ಈಶ್ವರಪ್ಪ ಗುಡ್‍ಬೈ

ಚುನಾವಣಾ ರಾಜಕಾರಣಕ್ಕೆ ಈಶ್ವರಪ್ಪ ಗುಡ್‍ಬೈ

ಬೆಂಗಳೂರು: ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ದಿನಬೆಳಗಾಗುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿವೆ. ಇದೀಗ ಬಿಜೆಪಿಯಿಂದ ಅಭ್ಯರ್ಥಿಗಳ ಲಿಸ್ಟ್ ಬಿಡುಗಡೆಯಾಗುವ ಹೊತ್ತಲ್ಲೇ ಮತ್ತೊಂದು ಬೆಳವಣಿಗೆ ನಡೆದಿದೆ.

ಹೌದು. ರಾಜ್ಯ ರಾಜಕೀಯದಿಂದ ಸಚಿವ ಕೆ.ಎಸ್ ಈಶ್ವರಪ್ಪ ಹಿಂದೆ ಸರಿದಿದ್ದಾರೆ. ಈ ಸಂಬಂಧ ನಡ್ಡಾಗೆ ಪತ್ರ ಬರೆದಿರುವ ಈಶ್ವರಪ್ಪ, ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ.

ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರಿಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು ಎಂದು ಈಶ್ವರಪ್ಪ ತಿಳಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News