Home ಸುದ್ದಿ ಶಿವಮೊಗ್ಗದಲ್ಲಿ ದಾಖಲೆ ಇಲ್ಲದ ಕೋಟ್ಯಾಂತರ ರೂ. ಮೌಲ್ಯದ ಚಿನ್ನ ವಶಕ್ಕೆ

ಶಿವಮೊಗ್ಗದಲ್ಲಿ ದಾಖಲೆ ಇಲ್ಲದ ಕೋಟ್ಯಾಂತರ ರೂ. ಮೌಲ್ಯದ ಚಿನ್ನ ವಶಕ್ಕೆ

ಶಿವಮೊಗ್ಗ: ಗಾಂಧಿ ಬಜಾರ್ ನಲ್ಲಿ ದಾಖಲೆ ಇಲ್ಲದ 5.83 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ.

ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ ದಾಖಲೆ ಇಲ್ಲದ 5.83 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ. ಸುಮಾರು 5.83 ಕೋಟಿ ಮೌಲ್ಯದ 9 ಕೆಜಿ 565 ಗ್ರಾಂ ಚಿನ್ನವನ್ನ ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ.

ಜಿಲ್ಲೆಯ ವಿವಿಧೆಡೆ ದಾಖಲೆ ಇಲ್ಲದ ಕೋಟ್ಯಾಂತರ ಹಣ ಜಪ್ತಿ ಮಾಡಲಾಗಿದೆ. ಶಿವಮೊಗ್ಗ ನಗರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 30.64 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದ ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ 27.60 ಲಕ್ಷ ಹಣ, ಶಿಕಾರಿಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ 1.79 ಲಕ್ಷ ನಗದು, ಭದ್ರಾವತಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.25 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ.

Translate »

You cannot copy content from Baravanige News