ಪ್ರಾಥಮಿಕ ಸದಸ್ಯತ್ವಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ..!!!

ಮಾಜಿ ಉಪ ಮುಖ್ಯಮಂತ್ರಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ.

ಅಥಣಿ ವಿಧಾನಸಭೆ ಕ್ಷೇತ್ರದ ಟಿಕೆಟ್ ಮಿಸ್ ಆಗಿರುವುದರಿಂದ ಅಸಮಾಧಾನಗೊಂಡಿರುವ ಲಕ್ಷ್ಮಣ ಸವದಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಬೆಳಗಾವಿಯ ಅಥಣಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸವದಿ,ನನಗೆ ಅಥಣಿ ಕ್ಷೇತ್ರದಲ್ಲಿ ಟಿಕೆಟ್‌ ಸಿಗುವ ವಿಶ್ವಾಸವಿತ್ತು.ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ನನ್ನ ಜತೆ ಹಲವು ಜನರು ಕೆಲಸ ಮಾಡುತ್ತಿದ್ದರು. ಅಥಣಿ ಕ್ಷೇತ್ರದಲ್ಲಿ ಜನರೇ ಹೈಕಮಾಂಡ್‌. ಬಿಜೆಪಿ ಟಿಕೆಟ್ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ? ಅಥಣಿ ಕ್ಷೇತ್ರದ ಜನರ ರಕ್ಷಣೆ ಮಾಡುವುದು ನನ್ನ ಜವಾಬ್ದಾರಿ. ನಾಳೆ ಸಂಜೆ ಕ್ಷೇತ್ರದ ಜನರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಮಾಡುತ್ತೇನೆ ಎಂದು ಹೇಳಿದ್ದಾರೆ.

ಟಿಕೆಟ್‌ಗಾಗಿ ನಾನು ಭಿಕ್ಷೆ ಬೇಡಬೇಕಾ? ನನಗೆ ಅಥಣಿ ಕ್ಷೇತ್ರದಲ್ಲಿ ಟಿಕೆಟ್‌ ತಪ್ಪಿದೆ. ನಿನಗೆ ಟಿಕೆಟ್ ಕೊಡುವುದಕ್ಕೆ ಆಗಲ್ಲ ಸುಮ್ಮನೆ ಬಿದ್ದುಕೊಂಡು ಇರು ಎಂದು ಹೇಳಿದ್ರೆ ಕೇಳುತ್ತಿದ್ದೆ. ಸೌಜನ್ಯಕ್ಕಾದರೂ ಮೊದಲು ನನ್ನ ಜೊತೆ ಚರ್ಚೆ ಮಾಡಬೇಕಿತ್ತು. 20 ವರ್ಷದಿಂದ ಬಿಜೆಪಿ ಪಕ್ಷಕ್ಕೆ ನನ್ನಿಂದ ಸಮಸ್ಯೆಯಾಗಿದ್ದರೆ ಕ್ಷಮೆ ಇರಲಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

You cannot copy content from Baravanige News

Scroll to Top