ಉಡುಪಿ : ಗಾಂಜಾ ಆರೋಪಿಗೆ 5 ವರ್ಷ ಜೈಲು

ಉಡುಪಿ: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಹಾರಾಷ್ಟ್ರದ ವಿನೋದ್‌ ರಾಮ್‌ ಸೇವಕ್‌ನಿಗೆ 5 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಶಾಂತವೀರ ಶಿವಪ್ಪ ಅವರು ಎ. 11ರಂದು ಆದೇಶಿಸಿದ್ದಾರೆ.


2019ರಲ್ಲಿ ಅಂದಿನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಲಾಗಿದ್ದ ನಿಶಾ ಜೇಮ್ಸ್‌ ನಿರ್ದೇಶನದಲ್ಲಿ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಕುಮಾರಚಂದ್ರ ಅವರ ಮಾರ್ಗದರ್ಶನದಲ್ಲಿ ಡಿಸಿಐಬಿ ಘಟಕದ ಪೊಲೀಸ್‌ ನಿರೀಕ್ಷಕ ಸಿ. ಕಿರಣ್‌ ಅವರಿಗೆ ದೊರೆತ ಮಾಹಿತಿ ಮೇರೆಗೆ ಡಿಸಿಐಬಿ ಸಿಬಂದಿಯೊಂದಿಗೆ ಉಡುಪಿಯ ಲಾಡ್ಜ್ ಒಂದರ ಬಳಿ ಗಾಂಜಾ ಮಾರಾಟ ಮಾಡಲು ಹೊಂದಿದ್ದ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದರು. ಆತನಿಂದ 10ಕೆಜಿ 600 ಗ್ರಾಂ ತೂಕದ ಗಾಂಜಾ ಹಾಗೂ ಇತರ ವಸ್ತುಗಳನ್ನು ವಶಪಡೆದುಕೊಂಡು ಸೆನ್‌ ಠಾಣೆಗೆ ಹಸ್ತಾಂತರಿಸಿದ್ದರು.

ಸೆನ್‌ ಠಾಣೆಯ ನಿರೀಕ್ಷಕರಾಗಿದ್ದ ಸೀತಾರಾಮ ಪಿ. ಪ್ರಕರಣ ದಾಖಲಿಸಿ 2020ರ ಮಾ. 3ರಂದು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರಕಾರಿ ಅಭಿಯೋಜಕರಾದ ಶಾಂತಿಬಾಯಿ ಹಾಗೂ ಜಯರಾಮ ಶೆಟ್ಟಿ ವಾದ ಮಂಡಿಸಿದ್ದರು.

You cannot copy content from Baravanige News

Scroll to Top