Thursday, April 25, 2024
Homeಸುದ್ದಿಕರಾವಳಿಅಂಕೋಲಾ : ರಿಕ್ಷಾ ಡಿಕ್ಕಿ : ಗರ್ಭಿಣಿ ಮಹಿಳೆ ಮೃತ್ಯು

ಅಂಕೋಲಾ : ರಿಕ್ಷಾ ಡಿಕ್ಕಿ : ಗರ್ಭಿಣಿ ಮಹಿಳೆ ಮೃತ್ಯು

ಅಂಕೋಲಾ : ರಸ್ತೆಯ ಬದಿಯ ಕಚ್ಚಾ ರಸ್ತೆಯಲ್ಲಿ ಹೋಗುತ್ತಿದ್ದ ಪಾದಾಚಾರಿ ಗರ್ಭಿಣಿಯೊಬ್ಬರು ರಿಕ್ಷಾ ಬಡಿದು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಭಾವಿಕೇರಿಯಲ್ಲಿ ನಡೆದಿದೆ.

ಶೋಭಾ ಗೋಪಾಲ ನಾಯಕ (28) ಮೃತ ದುರ್ದೈವಿ.

ಸುಮಾರು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಈಕೆ ತನ್ನ ಮನೆ ಮುಂದಿನ ಡಾಂಬರು ರಸ್ತೆ ಪಕ್ಕದ ಮಣ್ಣಿನ ರಸ್ತೆಯಲ್ಲಿ ತನ್ನ ಗಂಡನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ರಿಕ್ಷಾ ಚಾಲಕ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.


ಅಪಘಾತದ ರಭಸಕ್ಕೆ ಶೋಭಾ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ . ಪಟ್ಟಣದ ಲಕ್ಷೇಶ್ವರ – ಕುಂಬಾರಕೇರಿ ವ್ಯಾಪ್ತಿಯ ರಿಕ್ಷಾ ಚಾಲಕ ಅಪಘಾತ ನಡೆಸಿ ರಿಕ್ಷಾ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News