Tuesday, April 16, 2024
Homeಸುದ್ದಿಕರಾವಳಿರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಎಸ್. ಅಂಗಾರ : ಭಾಗೀರಥಿ ಮುರುಳ್ಯ ಪರ ಪ್ರಚಾರ

ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಎಸ್. ಅಂಗಾರ : ಭಾಗೀರಥಿ ಮುರುಳ್ಯ ಪರ ಪ್ರಚಾರ

ದಕ್ಷಿಣಕನ್ನಡ : ಜಿಲ್ಲೆಯ ಸುಳ್ಯದ ಮಾಜಿ ಶಾಸಕ ಎಸ್. ಅಂಗಾರ ರಾಜಕೀಯ ನಿವೃತ್ತಿ ಹೇಳಿಕೆಯನ್ನು ಹಿಂಪಡೆದಿದ್ದಾರೆ, ಭಾರೀ ಚರ್ಚೆಗೆ ಗ್ರಾಸವಾಗಿದ್ದ ಈ ಹೇಳಿಕೆ ಮತ್ತು ಈ ಕುರಿತು ವೀಡಿಯೋ ಕೂಡ ವೈರಲ್ ಆಗಿತ್ತು. ಇದೀಗ ಮಾಜಿ ಸಚಿವ ಎಸ್. ಅಂಗಾರ ರಾಜಕೀಯ ನಿವೃತ್ತಿ ಹೇಳಿಕೆಯನ್ನು ಹಿಂಪಡೆದಿದ್ದಾರೆ ಎಂದು ಹೇಳಲಾಗಿದೆ.

ಎಸ್. ಅಂಗಾರ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಬೆನ್ನಲ್ಲೇ ಈ ನಿರ್ಧಾರವನ್ನು ಹಿಂಪಡೆದಿದ್ದಾರೆ. ತಮಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು. ಈ ವಿಚಾರವಾಗಿ ಒಂದು ವೀಡಿಯೊ ಕೂಡ ವೈರಲ್ ಆಗಿತ್ತು. ಪ್ರಾಮಾಣಿಕತೆಗೆ ಬೆಲೆ ಇಲ್ಲ, ನಾನು ಏಕೆ ಬಿಜೆಪಿಗೆ ಕೆಲಸ ಮಾಡಬೇಕು ಎಂದು ರಾಜಕೀಯ ನಿವೃತ್ತಿ ಪಡೆಯುತ್ತಿದ್ದೇನೆ ಎಂದು ಎಸ್, ಅಂಗಾರ ಹೇಳಿದ್ದರು.

ಈಗ ಪ್ರಸ್ತುತ ಬಿಜೆಪಿ ಅಭ್ಯರ್ಥಿಯಾಗಿ ಭಾಗೀರಥಿ ಮುರುಳ್ಯ ಆಯ್ಕೆಯಾಗಿದ್ದು, ಇವರ ಪರವಾಗಿ ಪ್ರಚಾರ ನಡೆಸಲ್ಲ ಎಂದು ಹೇಳಿದ್ದರು. ಆದರೆ ಇದೀಗ ಮಾಜಿ ಶಾಸಕರ ಜತೆಗೆ ಪಕ್ಷದ ಹಿರಿಯ ನಾಯಕರು ಮಾತುಕತೆ ನಡೆಸಿ ತಮ್ಮ ನಿರ್ಧಾರವನ್ನು ಬದಲಿಸುವಂತೆ ಮನವೊಲಿಸಿದ್ದಾರೆ ಎಂದು ಹೇಳಲಾಗಿದೆ.

ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆ ನೋವಿನಿಂದ ಹೇಳಿದ್ದೇನೆ. ನಾನು ಮೊದಲಿನಂತೆ ಸಕ್ರಿಯವಾಗಿದ್ದು, ಭಾಗೀರಥಿ ಮುರುಳ್ಯ ಅವರ ಗೆಲುವೊಂದೇ ನಮ್ಮ ಮುಂದಿನ ನಡೆ. ವೈಯಕ್ತಿಕವಾಗಿ ನೀಡಿದ ಆ ಹೇಳಿಕೆ ಹಿಂದಕ್ಕೆ ಪಡೆಯುತ್ತಿದ್ದೇನೆ. ಆಯ್ಕೆ ಮಾಡಿದ ಅಭ್ಯರ್ಥಿ ಬಗ್ಗೆ ಬೇಸರ ಇಲ್ಲ, ಅವರ ಪರ ಕೆಲಸ ಮಾಡೋದು ನನ್ನ ಹೊಣೆಗಾರಿಕೆ. ನನ್ನ ಕಾರ್ಯಕರ್ತರು ಜೊತೆ ನಿಂತಿದ್ದಕ್ಕೆ ಧನ್ಯವಾದಗಳು. ನನಗೆ ಯಾವುದೇ ಅಸಮಾಧಾನ ಮತ್ತು ಭಿನ್ನಾಭಿಪ್ರಾಯ ಇಲ್ಲ. ಪಕ್ಷದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತೇನೆ. ನಾನು ಬೇಸರದಲ್ಲಿ, ಉದ್ವೇಗದಲ್ಲಿ ಹೇಳಿದ ಮಾತನ್ನು ವಾಪಸ್ಸು ಪಡೆಯುತ್ತೇನೆ. ಮುಂದೆ ಪಕ್ಷದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಿ ಗೆಲ್ಲಿಸುವುದು ನನ್ನ ಗುರಿ ಎಂದು ಎಸ್ ಅಂಗಾರ ಹೇಳಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News