Thursday, February 29, 2024
Homeಸುದ್ದಿರಾಜ್ಯಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ..!!!

ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ..!!!

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಳೆದ ವಾರ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ.

ಈ ಹಿಂದಿನ 2 ಪಟ್ಟಿಗಳಲ್ಲಿ 212 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿತ್ತು. ಇದೀಗ 10 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ.

ಕ್ಷೇತ್ರ – ಅಭ್ಯರ್ಥಿ

ಹುಬ್ಬಳ್ಳಿ ಧಾರವಾಡ ಸೆಂಟ್ರಲ್ – ಮಹೇಶ್ ಟೆಂಗಿನಕಾಯಿ
ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರ – ಉಮೇಶ್ ಶೆಟ್ಟಿ
ಬೆಂಗಳೂರಿನ ಹೆಬ್ಬಾಳ ಕ್ಷೇತ್ರ – ಕಟ್ಟಾ ಜಗದೀಶ್
ಮೈಸೂರಿನ ಕೃಷ್ಣರಾಜ ಕ್ಷೇತ್ರ – ಶ್ರೀವತ್ಸ
ಹಗರಿಬೊಮ್ಮನಹಳ್ಳಿ ಕ್ಷೇತ್ರ – ಬಿ.ರಾಮಣ್ಣ
ನಾಗಠಾಣ ಕ್ಷೇತ್ರ – ಸಂಜಯ್ ಐಹೊಳೆ
ಸೇಡಂ ಕ್ಷೇತ್ರ – ರಾಜಕುಮಾರ ಪಾಟೀಲ್ಕೊ
ಕೊಪ್ಪಳ ಕ್ಷೇತ್ರ – ಮಂಜುಳಾ ಅಮರೇಶ್
ರೋಣ ಕ್ಷೇತ್ರ – ಕಳಕಪ್ಪ ಬಂಡಿ
ಮಹದೇವಪುರ – ಮಂಜುಳಾ ಲಿಂಬಾಳಿ

ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿತ್ತು. 52 ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿತ್ತು. ಎರಡನೇ ಪಟ್ಟಿಯಲ್ಲಿ 23 ಮಂದಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು. ಆರು ಮಂದಿ ಹಾಲಿ ಶಾಸಕರಿಗೆ ಎರಡನೇ ಪಟ್ಟಿಯಲ್ಲಿ ಅವಕಾಶ ನೀಡಿರಲಿಲ್ಲ. ಇದೀಗ ಮೂರನೇ ಪಟ್ಟಿಯಲ್ಲಿ 10 ಮಂದಿಗೆ ಟಿಕೆಟ್ ನೀಡುವುದರೊಂದಿಗೆ ಒಟ್ಟು 222 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾದಂತಾಗಿದೆ. 2 ಕ್ಷೇತ್ರಗಳ ಟಿಕೆಟ್ ಅನ್ನು (ಶಿವಮೊಗ್ಗ ನಗರ ಹಾಗೂ ಮಾನ್ವಿ) ಬಿಜೆಪಿ ಬಾಕಿ ಉಳಿಸಿಕೊಂಡಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News