ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನಯಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಕಾಪು, ಏ.18: ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಹಸ್ರಾರು ಕಾರ್ಯಕರ್ತರೊಂದಿಗೆ ಜಾಥಾ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮೊದಲು ಸೊರಕೆಯವರು ಕಟಪಾಡಿ ವಿಶ್ವನಾಥ ಕ್ಷೇತ್ರ, ಕಾಪು ಮಾರಿಯಮ್ಮ ದೇವಸ್ಥಾನ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಕಾಪು ಜನಾರ್ದನ ದೇವಸ್ಥಾನದಲ್ಲಿ ಅಂತಿಮವಾಗಿ ಪೂಜೆ ಸಲ್ಲಿಸಿದರು. ಬಳಿಕ ಸುಮಾರು ಐದು ಸಾವಿರಕ್ಕೂ ಅಧಿಕ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಜಾಥಾದ ಮೂಲಕ ತೆರಳಿ ಕಾಂಗ್ರೆಸ್ ಕಚೇರಿಯ ಮುಂಭಾಗ ಸಾರ್ವಜನಿಕ ಸಭೆ ನಡೆಸಿದರು. ಬಳಿಕ ಅವರು ನಾಮಪತ್ರ ಸಲ್ಲಿಸಿದರು.

ಒಂದು ಪಕ್ಷದ ಪರವಾಗಿ ಪ್ರಚಾರ ಕಾರ್ಯ ಸರಕಾರಿ ಕರ್ತವ್ಯ ಲೋಪ: ಹರೇಕಳ ಗ್ರಾ. ಪಂ ಪಿಡಿಒ ಯಶವಂತ ಬೆಳ್ಚಡ ಅಮಾನತು!
ಕಾರು & ತೂಫಾನ್ ವಾಹನದ ನಡುವೆ ಭೀಕರ ಅಪಘಾತ: ನಾಲ್ವರು ಮೃತ್ಯು

You cannot copy content from Baravanige News

Scroll to Top