Friday, March 29, 2024
Homeಸುದ್ದಿಸೇನಾ ವಾಹನಕ್ಕೆ ಬೆಂಕಿ ತಗುಲಿ 4 ಯೋಧರು ಸಜೀವ ದಹನ

ಸೇನಾ ವಾಹನಕ್ಕೆ ಬೆಂಕಿ ತಗುಲಿ 4 ಯೋಧರು ಸಜೀವ ದಹನ

ಶ್ರೀನಗರ: ಸೇನಾ ಟ್ರಕ್‌ಗೆ ಬೆಂಕಿ ತಗುಲಿದ ಪರಿಣಾಮ ನಾಲ್ವರು ಯೋಧರು ಸಜೀವದಹನವಾಗಿರುವ ಭೀಕರ ಘಟನೆ ಜಮ್ಮು ಮತ್ತು ಕಾಶ್ಮೀರ ಪೂಂಚ್ ಪ್ರದೇಶದಲ್ಲಿ ನಡೆದಿದೆ.

ಘಟನೆ ಗುರುವಾರ ಭಟ ಧುರಿಯನ್ ಪ್ರದೇಶದ ಬಳಿ ನಡೆದಿರುವುದಾಗಿ ವರದಿಗಳು ತಿಳಿಸಿವೆ.

ಮೂಲಗಳ ಪ್ರಕಾರ ಸಿಡಿಲು ಬಡಿದ ಪರಿಣಾಮ ಯೋಧರನ್ನು ಸಾಗಿಸಲಾಗುತ್ತಿದ್ದ ಟ್ರಕ್‌ಗೆ ಬೆಂಕಿ ಹೊತ್ತುಕೊಂಡಿದೆ. ಪರಿಣಾಮ ನಾಲ್ವರು ಯೋಧರು ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಸೇನೆ ಹಾಗೂ ಪೊಲೀಸ್ ಸಿಬ್ಬಂದಿ ಆಗಮಿಸಿದ್ದು, ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News