ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಅನನ್ಯಾ ರಾಜ್ಯಕ್ಕೆ ಪ್ರಥಮ ; ವಿಜ್ಞಾನ ವಿಭಾಗದಲ್ಲಿ ಉಡುಪಿ ಜಿಲ್ಲೆಯ 4 ವಿದ್ಯಾರ್ಥಿಗಳು ಟಾಪರ್

ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯಕ್ಕೆ ದಕ್ಷಿಣಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಅದರಲ್ಲಿ ವಾಣಿಜ್ಯ ವಿಭಾಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಅನನ್ಯಾ ಕೆ. ಎ 600 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

ಕಳೆದ ಮಾರ್ಚ್ 9 ರಿಂದ 29ರವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ. ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು.

ದಕ್ಷಿಣ ಕನ್ನಡ ಮೊದಲ ಸ್ಥಾನ (95.33%) ಉಡುಪಿಗೆ ಎರಡನೇ ಸ್ಥಾನ( 95.24%) ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದರೆ ಯಾದಗಿರಿಗೆ (78.97%) ಕೊನೆಯ ಸ್ಥಾನ ಸಿಕ್ಕಿದೆ.

ಉಡುಪಿ ಜಿಲ್ಲೆಯ ವಿಜ್ಞಾನ ವಿಭಾಗದಲ್ಲಿ 4 ವಿದ್ಯಾರ್ಥಿಗಳು ಟಾಪರ್ ಆಗಿದ್ದು ಎಂಜಿಎಂ ಕಾಲೇಜಿನ ಸಾತ್ವಿಕ ಹಾಗೂ ಪ್ರಜ್ಞಾ ಕಾಲೇಜಿನ ಜೆಸ್ವಿತಾ ಡಯಾಸ್ 595 2ನೇ ಸ್ಥಾನ ಪಡೆದುಕೊಂಡಿದ್ದಾರೆ. ವೆಂಕಟರಮಣ ಕಾಲೇಜು ಕುಂದಾಪುರ, ಸ್ನೇಹಾ ಐ ರಾವ್ ಹಾಗೂ ಸ್ಮಯಾ ಸದಾನಂದ ಮುಬೇನ್ 594 3 ನೇ ಸ್ಥಾನ. ಕಾರ್ಕಳ ಜ್ಞಾನ ಸುಧಾ ಕಾಲೇಜಿನ ಸ್ಮಯಾ ಸದಾನಂದ ಮುಬೇನ್ 594 3ನೇ ಸ್ಥಾನ ಪಡೆದಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ ಶೇ.61.22, ವಾಣಿಜ್ಯ ವಿಭಾಗದಲ್ಲಿ ಶೇ.75.89, ವಿಜ್ಞಾನ ವಿಭಾಗದಲ್ಲಿ ಶೇ.85.71 ಬಂದಿದೆ.

You cannot copy content from Baravanige News

Scroll to Top