ಸರ್ಕಾರಿ ಬಂಗಲೆ ಖಾಲಿ ಮಾಡಿದ ರಾಹುಲ್ ಗಾಂಧಿ

ನವದೆಹಲಿ, ಏ 22: ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಬಳಿಕ ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಂಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಇಂದು ತಮ್ಮ ಅಧಿಕೃತ ಸರ್ಕಾರಿ ಬಂಗಲೆ ಖಾಲಿ ಮಾಡಿ ಲೋಕಸಭಾ ಸಚಿವಾಲಯಕ್ಕೆ ಹಸ್ತಾಂತರಿಸಿದರು.

ರಾಹುಲ್ ಗಾಂಧಿ ಅವ್ರ ಎಲ್ಲಾ ವಸ್ತುಗಳನ್ನ ಸ್ಥಳಾಂತರಿಸಲಾಗಿದ್ದು, ಅವುಗಳಲ್ಲಿ ಹೆಚ್ಚಿನವುಗಳನ್ನ ಅವರ ತಾಯಿ ಸೋನಿಯಾ ಗಾಂಧಿ ಮನೆಗೆ ತೆಗೆದೊಯ್ಯಲಾಗಿದೆ.

ಇನ್ನು ವಯನಾಡ್ನ ಮಾಜಿ ಸಂಸದ ರಾಹುಲ್ ಗಾಂಧಿ ಸುಮಾರು ಎರಡು ದಶಕಗಳಿಂದ ಈ ಬಂಗಲೆಯಲ್ಲಿ ವಾಸಿಸುತ್ತಿದ್ದರು.

ರಾಹುಲ್ ಗಾಂಧಿ ಅವರು ತಾಯಿ ಸೋನಿಯಾ ಗಾಂಧಿ ಅವರೊಂದಿಗೆ ತಮ್ಮ 10, ಜನಪಥ್ ನಿವಾಸದಲ್ಲಿ ವಾಸಿಸಲಿದ್ದಾರೆ ಎಂದು ವರದಿ ತಿಳಿಸಿದೆ.

You cannot copy content from Baravanige News

Scroll to Top