ಕರ್ನಾಟಕ ಸರ್ಕಾರದ ಮುಸ್ಲಿಮರ 2ಬಿ ಮೀಸಲಾತಿ ರದ್ದು ನಿರ್ಧಾರಕ್ಕೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಮುಸ್ಲಿಂಮರ 2ಬಿ ಮೀಸಲಾತಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ಮಾರ್ಚ್ 24 ರಂದು ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಮುಸ್ಲಿಮರಿಗೆ 2ಬಿ ಅಡಿ ನೀಡಲಾಗಿದ್ದ ಶೇ4 ರಷ್ಟು ಮೀಸಲಾತಿಯನ್ನು ಒಕ್ಕಲಿಗರು ಮತ್ತು ಲಿಂಗಾಯತರಿಗೆ ತಲಾ ಶೇ 2ರಂತೆ ಸಮವಾಗಿ ಹಂಚಲಾಗಿತ್ತು. ನಂತರ ಮುಸ್ಲಿಮರನ್ನು ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ ಮೀಸಲಾತಿ ನೀಡಲು ನಿರ್ಧರಿಸಿ, 2ಬಿಯನ್ನು ರದ್ದುಗೊಳಿಸಿತ್ತು.

ಇದೀಗ ಕರ್ನಾಟಕ ಸರ್ಕಾರದ ಮುಸ್ಲಿಂಮರ 2ಬಿ ಮೀಸಲಾತಿಯ ರದ್ದು ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆ ನೀಡಿದೆ.

ಇನ್ನು ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿದ್ದು, ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಲಾಗಿತ್ತು.

You cannot copy content from Baravanige News

Scroll to Top