Sunday, September 8, 2024
Homeಸುದ್ದಿಕರಾವಳಿಯ ದೈವ-ದೇವರ ಮೊರೆ ಹೋದ ಮಾಜಿ ಪ್ರಧಾನಿ ದೇವೇಗೌಡರು

ಕರಾವಳಿಯ ದೈವ-ದೇವರ ಮೊರೆ ಹೋದ ಮಾಜಿ ಪ್ರಧಾನಿ ದೇವೇಗೌಡರು

ಮಂಗಳೂರು, ಮೇ 02: ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ; ಯಾರು ಸಿಎಂ ಆಗುತ್ತಾರೆ ಎಂಬ ಲೆಕ್ಕಾಚಾರಗಳು ಈಗಲೇ ಶುರುವಾಗಿದೆ. ಈ ನಡುವೆ, ಕುಮಾರಸ್ವಾಮಿ ಮುಂದಿನ ಸಿಎಂ ಆಗಬೇಕೆಂದು ಮಾಜಿ ಪ್ರಧಾನಿ ದೇವೇಗೌಡರು ಇದೀಗ ತುಳುನಾಡಿನ ದೈವ-ದೇವರ ಮೊರೆ ಹೋಗುವ ಮೂಲಕ ಹರಕೆ ಹೊತ್ತಿದ್ದಾರೆ.

ತನ್ನ ಮಗ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ಮಾಜಿ ಪ್ರಧಾನಿ, ಮಣ್ಣಿನ ಮಗ ಕಾಲಿಗೆ ಚಕ್ರ ಕಟ್ಟಿ ತಿರುಗಾಡುತ್ತಿದ್ದಾರೆ. ತನ್ನ ಇಳಿ ವಯಸ್ಸಿನಲ್ಲೂ ಆರೋಗ್ಯವನ್ನು ಲೆಕ್ಕಿಸದೆ ಮಗನಿಗಾಗಿ ಶ್ರಮಿಸುತ್ತಿದ್ದಾರೆ. ಮಂಗಳೂರಿಗೆ ಭೇಟಿ ನೀಡಿದ ಸಂದರ್ಭ ಬಜಪೆ ಸುಂಕದಕಟ್ಟೆಯಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಗೆ ಹರಕೆ ಸಲ್ಲಿಸಿದ್ದಾರೆ. ಕುಮಾರಸ್ವಾಮಿ ಸಿಎಂ ಆದರೆ ರಂಗಪೂಜೆ ನೆರವೇರಿಸುವುದಾಗಿ ಹರಕೆ ಹೊತ್ತಿದ್ದಾರೆ. ಬಳಿಕ ಪೆರಾರ ಬ್ರಹ್ಮಬಲಾಂಡಿ ದೈವಸ್ಥಾನಕ್ಕೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ವೇಳೆ ಕುಮಾರಸ್ವಾಮಿ ಸಿಎಂ ಆಗಲು ಅವಕಾಶ ಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.ಕಾಂಗ್ರೆಸ್ ಟಿಕೆಟ್ ನೀಡದ ಮಂಗಳೂರು ಉತ್ತರ ಕ್ಷೇತ್ರದಲ್ಲೇ ಮೊಯಿದ್ದೀನ್ ಬಾವಾ ಜೆಡಿಎಸ್‌ನಿಂದ ಸ್ಪರ್ಧಿಸಿದ್ದು, ಬಾವಾ ಪರವಾಗಿ ಪ್ರಚಾರ ಸಭೆಯಲ್ಲಿ ಭಾಗಿಯಾಗಲು ದೇವೇಗೌಡರು ಕರಾವಳಿಗೆ ಭೇಟಿ ನೀಡಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News