Tuesday, July 23, 2024
Homeಸುದ್ದಿರಾಜ್ಯಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ವಿಜಯಪುರ ಗ್ರಾಮಸ್ಥರು..!!

ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ವಿಜಯಪುರ ಗ್ರಾಮಸ್ಥರು..!!

ವಿಜಯಪುರ: ತಪ್ಪು ಮಾಹಿತಿಯಿಂದ ಗ್ರಾಮಸ್ಥರೇ ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್‍ಗಳಾಗಿದ್ದವು. ಅವುಗಳನ್ನು ಸಿಬ್ಬಂದಿಯು ವಾಪಸ್ ತರೋದನ್ನು ಗಮನಿಸಿ ಜನರು ಪ್ರಶ್ನಿಸಿದ್ದಾರೆ. ಈ ವೇಳೆ ಸಿಬ್ಬಂದಿ ಸರಿಯಾಗಿ ಉತ್ತರಿಸದೇ ಇದ್ದಾಗ ತಪ್ಪು ಭಾವಿಸಿ ಮತಯಂತ್ರ ಒಡೆದು ಹಾಕಿದ್ದಾರೆ.

ಕಾಯ್ದಿರಿಸಲಾಗಿದ್ದ ಮತಯಂತ್ರಗಳನ್ನು ಬಿಸನಾಳ, ಡೋಣುರ ಗ್ರಾಮದಿಂದ ವಿಜಯಪುರಕ್ಕೆ ವಾಪಸ್ ತೆಗೆದುಕೊಂಡು ಬರುತ್ತಿದ್ದಾಗ ಈ ಘಟನೆ ನಡೆದಿದೆ. ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತಗೊಳಿಸಿ ವಾಪಸ್ ಕೊಂಡೊಯ್ಯಲಾಗುತ್ತಿದೆ ಎಂದು ತಪ್ಪು ಭಾವಿಸಿ ಮತ ಯಂತ್ರ ಒಡೆದು ಹಾಕಿದ್ದಾರೆ.

ಘಟನೆಯ ವೇಳೆ ಅಧಿಕಾರಿಗಳ ಕಾರನ್ನು ಜಖಂಗೊಳಿಸಿದ್ದಾರೆ. ಸಿಬ್ಬಂದಿಗೂ ಥಳಿಸಿದ್ದು, ಘಟನೆಯಿಂದಾಗಿ ಮಸಬಿನಾಳ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಆದರೂ ಸಹ ಮತದಾನ ಪ್ರಕ್ರಿಯೆ ಮುಂದುವರಿದಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News