Tuesday, July 23, 2024
Homeಸುದ್ದಿಮೊದಲ ಸುತ್ತಿನಲ್ಲಿ 1310 ಮತಗಳ ಮುನ್ನಡೆಯಲ್ಲಿ ಕಾಪು ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ

ಮೊದಲ ಸುತ್ತಿನಲ್ಲಿ 1310 ಮತಗಳ ಮುನ್ನಡೆಯಲ್ಲಿ ಕಾಪು ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ

ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಉಡುಪಿಯ ಸೈಂಟ್ ಸಿಸಿಲಿ ಆಂಗ್ಲ ಮಾಧ್ಯಮ ಶಾಲೆಯಲ್ಲಿರುವ ಮತ ಎಣಿಕೆ ಕೇಂದ್ರದಲ್ಲಿ ಆರಂಭಗೊಂಡಿದೆ.

ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಕೂರ್ಮಾರಾವ್ ನೇತೃತ್ವದಲ್ಲಿ ಸ್ಟ್ರಾಂಗ್ ರೂಮನ್ನು ತೆರೆಯಲಾಗಿದ್ದು ಮತ ಎಣಿಕೆಗೆ ಸಿದ್ಧತೆ ನಡೆಸಲಾಗುತ್ತಿದೆ.

ಮತ ಎಣಿಕೆ ಕೇಂದ್ರದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುತ್ತಿದೆ. ಈಗಾಗಲೇ ಮತ ಎಣಿಕಾ ಕೇಂದ್ರಕ್ಕೆ ಉಡುಪಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್, ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ, ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯಕುಮಾರ್ ಶೆಟ್ಟಿ,ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಆಗಮಿಸಿದ್ದಾರೆ.

ಕಾಪು ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ 1310 ಮುನ್ನಡೆ

ವಿನಯ್ ಕುಮಾರ್ ಸೊರಕೆ 4737

ಸುರೇಶ್ ಶೆಟ್ಟಿ ಗುರ್ಮೆ 6047

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News