ಸೋಮವಾರದಿಂದ ಮೂರು ದಿನ ವಿಧಾನಸಭೆ ಅಧಿವೇಶನ

ಬೆಂಗಳೂರು, ಮೇ 20: ಮೇ 22 ರ ಸೋಮವಾರದಿಂದ ಮೂರುದಿನಗಳ ವಿಧಾನಸಭೆ ಅಧಿವೇಶನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನೂತನ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಧಾಸಭೆ ಅಧಿವೇಶನದ ಬಗ್ಗೆ ರಾಜ್ಯಪಾಲರಿಗೆ ಈ ಬಗ್ಗೆ ಆಹ್ವಾನ ನೀಡಲಿದ್ದೇವೆ. ಹಂಗಾಮಿ ಸ್ಪೀಕರ್ ಆಗಿ ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ನೇಮಕಗೊಳ್ಳಲಿದ್ದಾರೆ. ಇವರು ನೂತನ ಶಾಸಕರಿಗೆ ಪ್ರಮಾಣವಚನ ಬೋಧಿಸುತ್ತಾರೆ. ಹಿಂದಿನ ವಿಧಾನಸಭೆಯ ಅವಧಿ ಮೇ ೨೩ಕ್ಕೆ ಅಂತ್ಯವಾಗಲಿದ್ದು, ಅಷ್ಟರೊಳಿಗೆ ಶಾಸಕ ಪ್ರಮಾಣವಚನ ಪೂರ್ಣಗೊಳ್ಳಬೇಕಾಗಿದೆ ಎಂದರು.

ಇದೇ ವೇಳೆ ಹೊಸ ಸಭಾಪತಿಯನ್ನು ಆಯ್ಕೆ ಮಾಡಲಾಗುವುದು ಎಂದರು.

You cannot copy content from Baravanige News

Scroll to Top