ಉಡುಪಿ: ಮಾಜಿ ಶಾಸಕ ಯು.ಆರ್. ಸಭಾಪತಿ‌ ನಿಧನ

ಉಡುಪಿ,ಮೇ 21: ಮಾಜಿ ಶಾಸಕ,‌ ಹಿರಿಯ ರಾಜಕಾರಣಿ ಯು.ಆರ್. ಸಭಾಪತಿ‌(71) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.

ಉಡುಪಿ ಬಡಗುಪೇಟೆ ನಿವಾಸಿಯಾಗಿದ್ದ ಸಭಾಪತಿ ಅವರು ಜಿಲ್ಲೆಯ ರಾಜಕೀಯ ಕ್ಷೇತ್ರದಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು.

1952 ರಲ್ಲಿ ಹುಟ್ಟಿದ ಅವರು, 1994 ರಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ(ಕೆಸಿಪಿ) ಚುನಾಯಿತರಾಗಿ ವಿಧಾನಸಭೆ ಪ್ರವೇಶಿಸಿದ್ದರು. ಆ ಬಳಿಕ ಕೆಸಿಪಿ ಕಾಂಗ್ರೆಸ್ ನೊಂದಿಗೆ ವಿಲೀನಗೊಂಡಿತ್ತು. 1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಶಾಸಕ ಆಗಿ ಮರು ಆಯ್ಕೆಯಾಗಿದ್ದರು. ಅನಂತರ ಜಿಲ್ಲೆಯ ರಾಜಕಾರಣದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.

ಇನ್ನು ಮೃತರು ಪತ್ನಿ, ಎರಡು ಗಂಡು, ಒಂದು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

You cannot copy content from Baravanige News

Scroll to Top