Monday, April 22, 2024
Homeಸುದ್ದಿಡಿಜಿ-ಐಜಿಪಿಯಾಗಿ ಆಲೋಕ್‌ ಮೋಹನ್‌ ಅಧಿಕಾರ ಸ್ವೀಕಾರ

ಡಿಜಿ-ಐಜಿಪಿಯಾಗಿ ಆಲೋಕ್‌ ಮೋಹನ್‌ ಅಧಿಕಾರ ಸ್ವೀಕಾರ

ಬೆಂಗಳೂರು: ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್‌ ಅಧಿಕಾರಿ ಆಲೋಕ್‌ ಮೋಹನ್‌ ಸೋಮವಾರ ಅಧಿಕಾರ ಸ್ವೀಕರಿಸಿದರು.

ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಪ್ರವೀಣ್‌ ಸೂದ್‌ ಅವರು ಆಲೋಕ್‌ ಮೋಹನ್‌ ಅವರಿಗೆ ಬ್ಯಾಟನ್‌ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಡಿಜಿ- ಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಕೇಂದ್ರೀಯ ತನಿಖಾ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ನೇಮಕಗೊಂಡಿದ್ದು, ಅವರಿಗೆ ಇಲಾಖೆಯಿಂದ ಬೀಳ್ಕೊಡುಗೆ ಪಥಸಂಚಲನ ಮೂಲಕ ಗೌರವಿಸಿ ಸೋಮವಾರ ಅವರನ್ನು ಈ ಹುದ್ದೆಯಿಂದ ಬಿಡುಗಡೆ ಮಾಡಲಾಯಿತು.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿ ಆಲೋಕ್‌ ಮೋಹನ್‌ ಅವರಿಗೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕ (ಡಿಜಿ-ಐಜಿಪಿ) ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News