ವಿಧಾನಸಭೆ ನೂತನ ಸ್ವೀಕರ್ ಆಗಿ ಯುಟಿ ಖಾದರ್ ಸರ್ವಾನುಮತದಿಂದ ಆಯ್ಕೆ

ಬೆಂಗಳೂರು : ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯುಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತಾವನೆ ಮಾಡಿದರು. ಸಿಎಂ ಪ್ರಸ್ತಾವವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅನುಮೋದಿಸಿದರು.

ಬಿಜೆಪಿ, ಜೆಡಿಎಸ್ ಅಭ್ಯರ್ಥಿ ಹಾಕದ ಹಿನ್ನೆಲೆಯಲ್ಲಿ 23ನೇ ಸ್ಪೀಕರ್‌ ಆಗಿ ಖಾದರ್‌ ಅವರನ್ನು ಅವಿರೋಧವಾಗಿ ಘೋಷಣೆ ಮಾಡಲಾಯಿತು.

ಇದೇ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯು.ಟಿ.ಖಾದರ್ಗೆ ಅಭಿನಂದನೆ ಸಲ್ಲಿಸಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಹ ನೂತನ ಸ್ಪೀಕರ್ ಖಾದರ್ಗೆ ಅಭಿನಂದನೆ ತಿಳಿಸಿ , ನ್ಯಾಯಾಂಗಕ್ಕಿಂತ ಎತ್ತರವಾದದ್ದು ಸ್ಪೀಕರ್ ಸ್ಥಾನ. ಹಾಗಾಗಿ ನಿಷ್ಪಕ್ಷಪಾತವಾಗಿ ತಾವು ಸದನವನ್ನು ನಡೆಸಬೇಕು. ಎಲ್ಲರನ್ನೂ ಸಮಾನವಾಗಿ ತೆಗೆದುಕೊಂಡು ಹೋಗುವ ಶಕ್ತಿ ನಿಮ್ಮಲ್ಲಿದೆ ಎಂದು ಹೇಳಿದರು.

“ಕೋಮು ಸೌಹಾರ್ದತೆಗೆ ಮತ್ತೊಂದು ಹೆಸರು ಯು.ಟಿ.ಖಾದರ್, ಎಲ್ಲರಿಗೂ ನೀವು ನ್ಯಾಯ ಒದಗಿಸಿ. ನಾವು ತಪ್ಪು ಮಾಡಿದರೂ ಸ್ಪೀಕರ್ ತಿದ್ದಿ ನಡೆಸಲಿ. ಸಭಾಧ್ಯಕ್ಷರು ಎಲ್ಲರನ್ನೂ ಸಮಾನವಾಗಿ ನೋಡಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

You cannot copy content from Baravanige News

Scroll to Top