Wednesday, September 18, 2024
Homeಸುದ್ದಿನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಅವಕಾಶ ನೀಡುವಂತೆ ಸುಪ್ರಿಂಕೋರ್ಟ್ ಗೆ ಅರ್ಜಿ ಸಲ್ಲಿಕೆ

ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಅವಕಾಶ ನೀಡುವಂತೆ ಸುಪ್ರಿಂಕೋರ್ಟ್ ಗೆ ಅರ್ಜಿ ಸಲ್ಲಿಕೆ

ನವದೆಹಲಿ, ಮೇ 25: ನೂತನ ಸಂತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳುವು ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ಭಾರೀ ವಿವಾದವೇ ಏರ್ಪಟ್ಟಿದೆ.

ಈ ನಡುವೆ ನೂತನ ಸಂತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅವಕಾಶ ನೀಡಬೇಕು ಎಂದು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯೊಂದು ಸುಪ್ರಿಂಕೋರ್ಟ್ ಗೆ ಸಲ್ಲಿಕೆಯಾಗಿದೆ.

ಅರ್ಜಿದಾರರ ವಕೀಲ ಜಯ ಸುಕಿನ್ ಅವರು ಸಲ್ಲಿಸಿದ ಅರ್ಜಿಯಲ್ಲಿರುವ ಪ್ರಕಾರ, “ಲೋಕಸಭೆ ಸೆಕ್ರೆಟರಿಯೇಟ್ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಆಹ್ವಾನಿಸದೆ ಸಂವಿಧಾನ ಉಲ್ಲಂಘಿಸಿದೆ. ಸಂಸತ್ತು ಭಾರತದ ಸರ್ವೋಚ್ಚ ಶಾಸಕಾಂಗ ಸಂಸ್ಥೆಯಾಗಿದೆ. ಭಾರತೀಯ ಸಂಸತ್ತು ರಾಷ್ಟ್ರಪತಿ ಮತ್ತು ರಾಜ್ಯಸಭೆ ಮತ್ತು ಲೋಕಸಭೆ ಎಂಬ ಎರಡು ಸದನಗಳನ್ನು ಒಳಗೊಂಡಿದೆ – ಸಂಸತ್ತಿನ ಸದನವನ್ನು ಕರೆಯಲು ಮತ್ತು ಮುಂದೂಡಲು ಅಥವಾ ಲೋಕಸಭೆಯನ್ನು ವಿಸರ್ಜಿಸಲು ರಾಷ್ಟ್ರಪತಿಗಳಿಗೆ ಅಧಿಕಾರವಿದೆ “ಎಂದು ಹೇಳಿಲಾಗಿದೆ

ಇನ್ನು ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿರುವ ನೂತನ ಸಂಸತ್ ಭವನದ ಸಮಾರಂಭವನ್ನು ಬಹಿಷ್ಕರಿಸುವ ನಿರ್ಧಾರವನ್ನು 20 ಪ್ರತಿಪಕ್ಷಗಳು ಪ್ರಕಟಿಸಿವೆ.

“ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಪೂರ್ಣವಾಗಿ ಬದಿಗೊತ್ತಿರುವ ಪ್ರಧಾನಿ ಮೋದಿಯವರು ಹೊಸ ಸಂಸತ್ತಿನ ಕಟ್ಟಡವನ್ನು ಸ್ವತಃ ಉದ್ಘಾಟಿಸುವ ನಿರ್ಧಾರವು ಘೋರ ಅವಮಾನ ಮಾತ್ರವಲ್ಲ, ಇದು ನಮ್ಮ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ” ಎಂದು ತಮ್ಮ ಜಂಟಿ ಹೇಳಿಕೆಯಲ್ಲಿ ವಿರೋಧ ಪಕ್ಷಗಳು ಹೇಳಿವೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News